HomeKarnatakaವ್ಯಾಜ್ಯ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ರಾಜ್ಯದಲ್ಲಿ ಗ್ರಾಮ ನ್ಯಾಯಾಲಯ ಪುನಾರಂಭ

ವ್ಯಾಜ್ಯ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ರಾಜ್ಯದಲ್ಲಿ ಗ್ರಾಮ ನ್ಯಾಯಾಲಯ ಪುನಾರಂಭ

ಉಡುಪಿ:  ವ್ಯಾಜ್ಯ ಮುಕ್ತ ಗ್ರಾಮದ ಗುರಿಯೊಂದಿಗೆ ರಾಜ್ಯದಲ್ಲಿ ಮತ್ತೆ ಗ್ರಾಮ ನ್ಯಾಯಾಲಯಗಳನ್ನು ಆರಂಭಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಉಡುಪಿ ಬ್ರಹ್ಮಾವರ ತಾಲೂಕಿನ ನೂತನ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಪ್ರತಿ ಗ್ರಾಮವು ವ್ಯಾಜ್ಯ ಮುಕ್ತವಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ರಾಜ್ಯದಲ್ಲಿ ಗ್ರಾಮ ನ್ಯಾಯಾಲಯಗಳನ್ನು ಪುನಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಶಕಗಳಿಂದ ದೇಶದಲ್ಲಿ ಬಾಕಿ ಉಳಿದ ಪ್ರಕರಣಗಳ ಇತ್ಯರ್ಥಕ್ಕೆ 2006 -08 ರಲ್ಲಿ ಗ್ರಾಮ ನ್ಯಾಯಾಲಯಗಳನ್ನು ಜಾರಿಗೆ ತರಲಾಗಿತ್ತು. ಹಿಮಾಚಲ ಪ್ರದೇಶ ಹೊರತುಪಡಿಸಿ ಉಳಿದದೆ ಸ್ಥಗಿತಗೊಂಡಿವೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಕಿ ಪ್ರಕರಣಗಳ ಹಿನ್ನೆಲೆಯಲ್ಲಿ ಈ ವರ್ಷ ಗ್ರಾಮ ನ್ಯಾಯಾಲಯಗಳನ್ನು ಪುನರಾರಂಭ ಮಾಡಲಾಗುವುದು. ಮೊದಲಿಗೆ ಎರಡು ಗ್ರಾಮ ನ್ಯಾಯಾಲಯ ಆರಂಭಿಸಿ ಮುಂದೆ ಅಗತ್ಯ ಮೂಲ ಸೌಕರ್ಯ ಹೊಂದಿಸಿಕೊಂಡು 2000 ಗ್ರಾಮಗಳಲ್ಲಿ ನ್ಯಾಯಾಲಯ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular