BIG NEWS : ರಾಜ್ಯದ ಗ್ರಾಮ ಪಂಚಾಯತ್ ‘PDO’ ಗಳ ವರ್ಗಾವಣೆ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು :   ರಾಜ್ಯದ ಗ್ರಾಮ ಪಂಚಾಯತ್ ‘PDO’ ಗಳ ವರ್ಗಾವಣೆ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ಅನ್ನು ರಚಿಸಲಾಗಿದ್ದು ಅದರನ್ವಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಕ್ರಮ ವಹಿಸಲಾಗುತ್ತಿದೆ.

ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯನಿರತ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಪೈಕಿ ಶೇಕಡಾ 4 ರಷ್ಟು ಮೀರದಂತೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಖಾಲಿ ಇರುವ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಜಿಲ್ಲೆಯೊಳಗೆ ನಿಯೋಜನೆ ಮೇರೆಗೆ ನೇಮಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಆಡಳಿತಾತ್ಮಕ ಅಧಿಕಾರ ಪ್ರತ್ಯಾಯೋಜಿಸಲು ಸರ್ಕಾರವು ನಿರ್ಧರಿಸಿದೆ. ಅದರಂತೆ ಈ ಕೆಳಕಂಡ ಆದೇಶ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯನಿರತ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಪೈಕಿ ಶೇಕಡಾ 4 ರಷ್ಟು ಮೀರದಂತೆ ಆಡಳಿತಾತ್ಮಕ ಹಿತದೃಷ್ಟಿಯಿಂದ ಖಾಲಿ ಇರುವ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಈ ಕೆಳಕಂಡ ಷರತ್ತಿಗೊಳಪಟ್ಟು ಜಿಲ್ಲೆಯೊಳಗೆ ನಿಯೋಜನೆ ಮೇರೆಗೆ ನೇಮಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಆಡಳಿತಾತ್ಮಕ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಿದೆ.

1. ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕನಿಷ್ಠ ಮೂರು ವರ್ಷವಾದರೂ ವರ್ಗಾವಣೆಗೊಂಡ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸತಕ್ಕದ್ದು.

2. ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಕಳೆದ 3 ವರ್ಷಗಳಲ್ಲಿ ನಿಯೋಜನೆ ಮೇರೆಗೆ ಅಥವಾ ವರ್ಗಾವಣೆಯಿಂದ ಕಾರ್ಯ ನಿರ್ವಹಿಸಿದ ಗ್ರಾಮ ಪಂಚಾಯತಿಗೆ ನಿಯೋಜಿಸತಕ್ಕದ್ದಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read