BREAKING: ಶಾಸಕ ವಿನಯ್ ಕುಲಕರ್ಣಿಗೆ 2 ದಿನ ಮಧ್ಯಂತರ ಜಾಮೀನು ಮಂಜೂರು

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶ ಮಾಡಿದ ಆರೋಪದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಮಗ ಹೇಮಂತ್ ಗೆ ಅಪಘಾತವಾಗಿದ್ದು, ಆತನ ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿಸುತ್ತಿರುವುದರಿಂದ ತನಗೆ ಜಾಮೀನು ನೀಡುವಂತೆ ಕೋರಿ ವಿನಯ್ ಕುಲಕರ್ಣಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಅವರಿಗೆ ಕೇವಲ 2 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಎರಡು ದಿನಗಳ ಬಳಿಕ ಸೆ.11ರಂದು ಸಂಜೆ ವಿನಯ್ ಕುಲಕರಣಿ ಮರಳಿ ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿ ಜೈಲುಸೇರಬೇಕು ಎಂದು ಕೋರ್ಟ್ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read