HomeKarnatakaಕ್ಷೇತ್ರ ಪ್ರವೇಶಕ್ಕೆ ಷರತ್ತು ಸಡಿಲಿಕೆ ಕೋರಿದ್ದ ಶಾಸಕ ವಿನಯ ಕುಲಕರ್ಣಿಗೆ ಮತ್ತೆ ಶಾಕ್

ಕ್ಷೇತ್ರ ಪ್ರವೇಶಕ್ಕೆ ಷರತ್ತು ಸಡಿಲಿಕೆ ಕೋರಿದ್ದ ಶಾಸಕ ವಿನಯ ಕುಲಕರ್ಣಿಗೆ ಮತ್ತೆ ಶಾಕ್

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಕೋರ್ಟ್ ನಿರಾಕರಿಸಿದೆ.

ಷರತ್ತು ಸಡಿಲಿಕೆ ಕೋರಿದ ಶಾಸಕರ ಅರ್ಜಿಯನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಸಿಬಿಐ ಪರವಾಗಿ ಎಸ್‌ಪಿಪಿ ಗಂಗಾಧರ ಶೆಟ್ಟಿ ಷರತ್ತು ಸಡಿಲಿಕೆ ಮಾಡದಂತೆ ವಾದಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಸಕನಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಲು ವಿನಯ ಕುಲಕರ್ಣಿ ಅವಕಾಶ ಕೋರಿದ್ದರು. ಸ್ಪರ್ಧೆಗೆ ಟಿಕೆಟ್ ಪಡೆಯುವ ಮೊದಲು ಕೋರ್ಟ್ ಅನುಮತಿ ಪಡೆದಿಲ್ಲ. ಟಿಕೆಟ್ ಪಡೆದ ನಂತರ ಕ್ಷೇತ್ರದ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ. ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಹೀಗಾಗಿ ಧಾರವಾಡ ಭೇಟಿಗೆ ಅನುಮತಿ ನಿರಾಕರಿಸಿ ಆದೇಶ ಹೊರಡಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಬಿ. ಜಯಂತ್ ಕುಮಾರ್ ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular