HomeLive NewsBREAKING: ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು

BREAKING: ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು

ನವದೆಹಲಿ: ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಯೋಗೇಶ್ ಗೌಡ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಲು ನಿರಾಕರಿಸಿತ್ತು. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಎರಡನೇ ಬಾರಿ ಜೈಲು ಸೇರಿದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೇ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದೆ. ಅಲ್ಲದೇ 2 ತಿಂಗಳ ಒಳಗಾಗಿ ವಿಚಾರಣೆಯನ್ನು ಮುಗಿಸುವಂತೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್‌ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸೆಪ್ಟೆಂಬರ್ 2019 ರಲ್ಲಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡದ ಬಗ್ಗೆ ಆರೋಪಿಸಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ, ಕುಲಕರ್ಣಿ ಅವರನ್ನು 2021ರ ಆಗಸ್ಟ್ 13ರಂದು ಬಿಡುಗಡೆ ಮಾಡಲಾಯಿತು.

ಸಾಕ್ಷ್ಯ ನಾಶಕ್ಕೆ ಯತ್ನ ಆರೋಪ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಮತ್ತೆ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ವಿನಯ್ ಕುಲಕರ್ಣಿ 2025ರ ಜೂನ್ 13 ರಿಂದ ನ್ಯಾಯಾಂಗ ಬಂಧನದಲ್ಲಿದ್ದು, ವಿಚಾರಣೆಯನ್ನು ಎದುರಿಸುತ್ತಿದ್ದರು. ಇದೀಗ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular