ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರಣಿ ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 17ರಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ವಿನಯ್ ಕುಲಕರ್ಣ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಧಾರವಾಡದ ಜಿಪಂ ಸದಸ್ಯನಾಗಿದ್ದ ಯೋಗೀಶ್ ಗೌಡ ಅವರ ಕೊಲೆಗೆ ಕ್ರಿಮಿನಲ್ ಪಿತೂರಿ ನಡೆಸಿದ ಮುಖ್ಯ ಆರೋಪಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆಯಾಗಿದೆ. ಈ ತೀರ್ಪಿನಿಂದಾಗಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

