HomeLive NewsBIG NEWS: ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ

BIG NEWS: ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ

ಧಾರವಾಡ: ಧಾರವಾಡ ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬಂದಿದೆ.

ಇಂದು (ಏಪ್ರಿಲ್ 17) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನು ಪ್ರಕಾರ, ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣವೇ ಶಾಸಕ ಸ್ಥಾನ ರದ್ದಾಗುತ್ತದೆ. ಅದರಂತೆ ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಹಿನ್ನೆಲೆ ವಿನಯ್​ ಕುಲಕರ್ಣಿ ಅವರ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತವಾಗಿದೆ. ಕೋರ್ಟ್ ತನ್ನ ತೀರ್ಪಿನ ಪ್ರತಿಯನ್ನು ಸ್ಪೀಕರ್ ಗೆ ಕಳುಹಿಸಲಿದ್ದು, ಆ ಬಳಿಕ ಸ್ಫೀಕರ್ ಅಧಿಕೃತವಾಗಿ ವಿನಯ್ ಕುಲಕರಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಿದ್ದಾರೆ.

ಕಾನೂನು ಪ್ರಕಾರ ಶಿಕ್ಷೆ ಪ್ರಕಟವಾದ ದಿನದಿಂದಲೇ ಶಾಸಕ ಸ್ಥಾನದಿಂದ ತಕ್ಷಣವೇ ಅನರ್ಹವಾಗುತ್ತೆ. ‘ಜನಪ್ರತಿನಿಧಿ ಕಾಯ್ದೆ 1951’ರ ಸೆಕ್ಷನ್ 8(3) ರ ಪ್ರಕಾರ, ಯಾವುದೇ ಶಾಸಕರು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಶಿಕ್ಷೆಗೆ ಗುರಿಯಾದರೆ ಅವರು ತಕ್ಷಣವೇ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. 2013ರ ‘ಲಿಲಿ ಥಾಮಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪಿನ ಪ್ರಕಾರ ಮೇಲ್ಮನವಿ ಸಲ್ಲಿಸಲು ನೀಡಲಾಗುತ್ತಿದ್ದ 3 ತಿಂಗಳ ಕಾಲಾವಕಾಶವನ್ನು ರದ್ದುಪಡಿಸಲಾಗಿದೆ. ಹಾಗಾಗಿ, ಶಿಕ್ಷೆಯಾದ ತಕ್ಷಣ ಅನರ್ಹತೆ ಅನ್ವಯವಾಗುತ್ತದೆ.

ಜೈಲು ಶಿಕ್ಷೆಯ ಅವಧಿಯನ್ನು ಪೂರೈಸಿದ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶವಿರುವುದಿಲ್ಲ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಕಾರಣ, ಉನ್ನತ ನ್ಯಾಯಾಲಯವು ಶಿಕ್ಷೆಯನ್ನು ರದ್ದುಗೊಳಿಸದ ಹೊರತು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದು ಅಸಾಧ್ಯ. ಇನ್ನು ಶಾಸಕತ್ವ ಅಧಿಕೃತವಾಗಿ ಅನರ್ಹಗೊಂಡ ತಕ್ಷಣ ಕ್ಷೇತ್ರ ಖಾಲಿಯಾಗಲಿದೆ. ವಿಧಾನಸಭಾ ಸಚಿವಾಲಯದಿಂದ ಕ್ಷೇತ್ರ ‘ಖಾಲಿ’ ಇದೆ ಎಂದು ಘೋಷಣೆಯಾಗಲಿದ್ದು, ಬಳಿಕ ಚುನಾವಣಾ ಆಯೋಗ 6 ತಿಂಗಳ ಒಳಗೆ ಉಪಚುನಾವಣೆಯನ್ನು ನಡೆಸುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular