HomeLatest NewsBIG NEWS: ಶಾಸಕ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಜೈಲು ಪಾಲು

BIG NEWS: ಶಾಸಕ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಜೈಲು ಪಾಲು

ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲುಪಾಲಾಗಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿ, ಒಂದು ವಾರದೊಳಗೆ ಕೋರ್ಟ್ ಗೆ ಶರಣಾಗುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರಣಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಶರಣಾಗಿದ್ದರು.

ಈ ವೇಳೆ ಕೋರ್ಟ್, ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ವಿನಯ್ ಕುಲಕರ್ಣಿಯನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ಶಾಸಕ ವಿನಯ್ ಕುಲಕರರ್ಣಿ ಮತ್ತೆ ಜೈಲುಪಾಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular