HomeKarnatakaವಿನಯ್ ಕುಲಕರ್ಣಿ ಅನರ್ಹತೆ ಆದೇಶ ರದ್ದು: ಶಾಸಕ ಸ್ಥಾನದಲ್ಲಿ ಮುಂದುವರಿಕೆ

ವಿನಯ್ ಕುಲಕರ್ಣಿ ಅನರ್ಹತೆ ಆದೇಶ ರದ್ದು: ಶಾಸಕ ಸ್ಥಾನದಲ್ಲಿ ಮುಂದುವರಿಕೆ

ಬೆಂಗಳೂರು: ಧಾರವಾಡ ಶಾಸಕ ವಿನಯ್ ಕುಲಕರ್ಣಿ ಮತ್ತೆ ಶಾಸಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಲಾಗಿದೆ.

ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ವಿರುದ್ಧ ಬೆಂಗಳೂರು ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ವಿಧಿಸಿದ ಜೀವಾವಧಿ ಶಿಕ್ಷೆ ತೀರ್ಪನ್ನು ಹೈಕೋರ್ಟ್ ಅಮಾನತ್ತಿನಲ್ಲಿಟ್ಟಿರುವ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಇತರರಿಗೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹೀಗಾಗಿ ವಿನಯ್ ಕುಲಕರ್ಣಿ ಅವರ ಶಾಸಕತ್ವ ರದ್ದು ಮಾಡಲಾಗಿತ್ತು. ಹೈಕೋರ್ಟ್ ಜೀವಾವಧಿ ಶಿಕ್ಷೆ ತೀರ್ಪನ್ನು ಅಮಾನತ್ತಿನಲ್ಲಿಟ್ಟಿರುವ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಲಾಗಿದೆ. ಅವರು ಮತ್ತೆ ಶಾಸಕರಾಗಿ ಮುಂದುವರೆಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular