HomeKarnatakaಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ; ಧಾರವಾಡದ ಸೂಕ್ಷ್ಮ ಪ್ರದೇಶಗಳಲ್ಲಿ ರೌಂಡ್ಸ್

ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ; ಧಾರವಾಡದ ಸೂಕ್ಷ್ಮ ಪ್ರದೇಶಗಳಲ್ಲಿ ರೌಂಡ್ಸ್

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀರ್ಪು ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಜನರು ಆರೋಪಿಗಳಾಗಿದ್ದು, ಇಂದು ಅವರ ಭವಿಷ್ಯ ನಿರ್ಧಾರವಾಗಲಿದೆ.

ಈ ಹಿನ್ನೆಲೆಯಲ್ಲಿ ಒಂದಿಒಮ್ಮೆ ವ್ಯತಿರಿಕ್ತ ತೀರ್ಪು ಬಂದರೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗೃತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿನಯ್ ಕುಲಕರ್ಣಿ ನಿವಾಸದ ಗ್ರಾಮದ ಸುತ್ತಮುತ್ತ ಪೊಲೀಸರು ಭದ್ರತೆ ನಿಟ್ಟಿನಲ್ಲಿ ರೌಂಡ್ಸ್ ಹಾಕುತ್ತಿದ್ದಾರೆ. ತೀರ್ಪು ಪ್ರಕಟಗೊಂಡ ಬಳಿಕ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದ್ದು, ವಿನಯ್ ಕುಲಕರ್ಣಿ ನಿವಾಸದ ಬಳಿ 100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular