ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂದು ನಟಿ ರಮ್ಯಾ ಪೋಸ್ಟ್ ಮಾಡಿದ್ದ ಬೆನ್ನಲ್ಲೇ ನಟಿ ರಮ್ಯಾ ವಿರುದ್ಧ ತಿರುಗಿ ಬಿದ್ದಿರುವ ದರ್ಶನ್ ಫ್ಯಾನ್ಸ್ ರಮ್ಯಾ ವಿರುದ್ಧ ಅಶ್ಲೀಲ ಮೆಸೇಜ್ ಕಳಿಸುವುದು, ಕೆಟ್ಟದಾಗಿ ಕಮೆಂಟ್ ಮಾಡುವುದು ಆರಂಭಿಸಿದ್ದು, ಇದರ ವಿರುದ್ಧ ಸಿಡಿದೆದ್ದಿರುವ ರಮ್ಯಾ, ಸೈಬರ್ ಕ್ರೈಂಗೆ ದೂರು ನೀಡಲು ಮುಂದಾಗಿದ್ದಾರೆ.
ನಟಿ ರಮ್ಯಾ ಅವರಿಗೆ ರಾಜ್ಯ ಮಹಿಳಾ ಆಯೋಗ ಕೂಡ ಬೆಂಬಲ ನೀಡಿದೆ. ನಟ ಪ್ರಥಮ್, ಚೇತನ್ ಸೇರಿದಂತೆ ಹಲವರು ನಟಿ ರಮ್ಯಾ ಪರ ಧ್ವನಿ ಎತ್ತಿದ್ದಾರೆ. ಇದರ ಬೆನ್ನಲ್ಲೇ ನಟ ವಿನಯ್ ರಾಜಕುಮಾರ್ ಕೂಡ ರಮ್ಯಾ ಪರ ನಿಂತಿದ್ದಾರೆ.
‘ಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ. ಹೆಣ್ಣುಮಕ್ಕಳನ್ನು ಕೀಳಾಗಿ ಕಾಣೋ ಪ್ರಪಂಚ ಬೆಳವಣಿಗೆಗೂ ಮುನ್ನ ನಾಶವಾಗಬೇಕು’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ನಟಿ ರಮ್ಯಾ ಪರ ಬೆಂಬಲಕ್ಕೆ ನಿಂತಿದ್ದಾರೆ.