HomeEntertainmentವಿನಯ್ ರಾಜ್‌ಕುಮಾರ್ ನಟನೆಯ 'ಸಿಟಿ ಲೈಟ್ಸ್' ಚಿತ್ರದ ಟ್ರೇಲರ್ ಸೆಪ್ಟೆಂಬರ್ 13ಕ್ಕೆ ರಿಲೀಸ್!

ವಿನಯ್ ರಾಜ್‌ಕುಮಾರ್ ನಟನೆಯ ‘ಸಿಟಿ ಲೈಟ್ಸ್’ ಚಿತ್ರದ ಟ್ರೇಲರ್ ಸೆಪ್ಟೆಂಬರ್ 13ಕ್ಕೆ ರಿಲೀಸ್!

ಸ್ಯಾಂಡಲ್‌ವುಡ್‌ನ ಭರವಸೆಯ ನಟ ವಿನಯ್ ರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಸಿಟಿ ಲೈಟ್ಸ್’ ಚಲನಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಬರುವ ಸೆಪ್ಟೆಂಬರ್ 13ರಂದು ಚಿತ್ರದ ಅಧಿಕೃತ ಟ್ರೇಲರ್ ಪ್ರೇಕ್ಷಕರ ಮುಂದೆ ಬರಲಿದ್ದು, ಸೆಪ್ಟೆಂಬರ್ 18ರಂದು ಸಿನಿಮಾ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ದುನಿಯಾ ಟಾಕೀಸ್ ಮತ್ತು ಯಂತ್ರೋದ್ಧಾರಕ ಆಂಜನೇಯ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ಮೂಡಿಬಂದಿದೆ. ಚಿತ್ರದಲ್ಲಿ ವಿನಯ್ ರಾಜ್‌ಕುಮಾರ್ ಅವರಿಗೆ ಜೋಡಿಯಾಗಿ ಮೋನಿಷಾ ವಿಜಯಕುಮಾರ್ ಅಭಿನಯಿಸಿದ್ದಾರೆ. ವಿಜಯಕುಮಾರ್ ಅವರು ಈ ಚಿತ್ರಕ್ಕೆ ಕಥೆ ಮತ್ತು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು, ವಿಕ್ರಮ್ ಆರ್ಯ ಅವರೊಂದಿಗೆ ಸೇರಿ ಜಂಟಿಯಾಗಿ ನಿರ್ಮಾಣವನ್ನೂ ಮಾಡಿದ್ದಾರೆ.

ಮಾಸ್ತಿ ಅವರ ಸಂಭಾಷಣೆ ಹಾಗೂ ಚರಣ್ ರಾಜ್ ಎಂ.ಆರ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಶಿವಸೇನಾ ಮತ್ತು ಹರ್ಷ ಗೌಡ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಅವರ ಸಂಕಲನ ಸಿನಿಮಾಗೆ ಮತ್ತಷ್ಟು ಮೆರಗು ತಂದಿದೆ. ದ್ವಿತೀಯ ಹಂತದ ತಾಂತ್ರಿಕ ತಂಡದಲ್ಲಿ ವಿನೋದ್, ನರಸಿಂಹ ಸಿ, ಸಾಗರ್ ಮತ್ತು ಡ್ಯಾನಿ ಅವರ ಸಾಹಸ ನಿರ್ದೇಶನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ವಿಭಿನ್ನ ಕಥಾಹಂದರದ ಮೂಲಕ ಗಮನ ಸೆಳೆದಿರುವ ವಿನಯ್ ರಾಜ್‌ಕುಮಾರ್, ‘ಸಿಟಿ ಲೈಟ್ಸ್’ ಮೂಲಕ ಮತ್ತೊಂದು ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular