HomeIndiaಕುಸ್ತಿ ಫೆಡರೇಷನ್ ಅಧ್ಯಕ್ಷರ ವಿರುದ್ಧ ಗುರುತರ ಆರೋಪ ಮಾಡಿದ ವಿನೇಶಾ ಫೋಗಟ್

ಕುಸ್ತಿ ಫೆಡರೇಷನ್ ಅಧ್ಯಕ್ಷರ ವಿರುದ್ಧ ಗುರುತರ ಆರೋಪ ಮಾಡಿದ ವಿನೇಶಾ ಫೋಗಟ್

ಭಾರತ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಒಲಂಪಿಯನ್ ಕುಸ್ತಿಪಟು ವಿನೇಶಾ ಫೋಗಟ್ ಗುರುತರ ಆರೋಪ ಮಾಡಿದ್ದಾರೆ. ಬ್ರಿಜ್ ಭೂಷಣ್ ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನವದೆಹಲಿಯ ಜಂತರ್ ಮಂತರ್ ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಖ್ಯಾತನಾಮ ಕುಸ್ತಿಪಟುಗಳು ಪ್ರತಿಭಟನೆ ಆರಂಭಿಸಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ವಿನೇಶಾ ಫೋಗಟ್ ಈ ಆರೋಪ ಮಾಡಿದ್ದಾರೆ. ಆದರೆ ನನ್ನೊಂದಿಗೆ ಅಂತಹ ವರ್ತನೆ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವವರ ಪೈಕಿ ಬ್ರಿಜ್ ಭೂಷಣ್ ಸಿಂಗ್ ಅವರಿಂದ ಲೈಂಗಿಕ ಕಿರುಕುಳಕ್ಕೊಳಗಾದ ಓರ್ವ ಕುಸ್ತಿಪಟು ಇದ್ದಾರೆ ಎಂದು ವಿನೇಶಾ ಫೋಗಟ್ ತಿಳಿಸಿದ್ದು, ಲಕ್ನೋದಲ್ಲಿ ನಡೆದ ರಾಷ್ಟ್ರೀಯ ತರಬೇತಿ ಶಿಬಿರದಲ್ಲೂ ಕೆಲವು ಕೋಚ್ ಗಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂದು ಆಪಾದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular