HomeIndiaBIG BREAKING: ಪ್ಯಾರಿಸ್ ಒಲಿಂಪಿಕ್ಸ್ ಅನರ್ಹತೆ ಬೆನ್ನಲ್ಲೇ ವಿನೇಶ್ ಫೋಗಟ್ ನಿವೃತ್ತಿ ಘೋಷಣೆ

BIG BREAKING: ಪ್ಯಾರಿಸ್ ಒಲಿಂಪಿಕ್ಸ್ ಅನರ್ಹತೆ ಬೆನ್ನಲ್ಲೇ ವಿನೇಶ್ ಫೋಗಟ್ ನಿವೃತ್ತಿ ಘೋಷಣೆ

ನವದೆಹಲಿ: ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತರ ಗುರುವಾರ ಕುಸ್ತಿಯಿಂದ ನಿವೃತ್ತಿ ಘೋಷಿಸಿದರು. ವಿನೇಶ್ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಚಿನ್ನದ ಪದಕದ ಪಂದ್ಯದ ಮುನ್ನ ತೂಕದ ಸಮಯದಲ್ಲಿ 100 ಗ್ರಾಂ ಅಧಿಕ ತೂಕ ಕಂಡುಬಂದ ನಂತರ ಅವರನ್ನು ಅನರ್ಹಗೊಳಿಸಲಾಯಿತು.

ಅಮ್ಮಾ, ಕುಸ್ತಿ ನನ್ನನ್ನು ಸೋಲಿಸಿದೆ, ನಾನು ಸೋತಿದ್ದೇನೆ. ನಾನು ಸೋತಿದ್ದೇನೆ … ನನ್ನ ಧೈರ್ಯವು ಮುರಿದುಹೋಗಿದೆ, ನನಗೆ ಈಗ ಯಾವುದೇ ಶಕ್ತಿ ಇಲ್ಲ ಎಂದು ವಿನೇಶ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿನೇಶ್ ಮಂಗಳವಾರ ತಮ್ಮ ವಿಭಾಗದಲ್ಲಿ ಚಿನ್ನದ ಪದಕದ ಪಂದ್ಯವಾಡಲು ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಇತಿಹಾಸ ನಿರ್ಮಿಸಿದರು. ಅನರ್ಹತೆಗೆ ಮುನ್ನ ಆಕೆಗೆ ಕನಿಷ್ಠ ಬೆಳ್ಳಿ ಪದಕ ಖಚಿತವಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular