ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ತೂಕದ ಕಾರಣಕ್ಕೆ ಪದಕ ವಂಚಿತರಾದ ಖ್ಯಾತ ಕುಸ್ತಿ ಪಟು ವಿನೇಶ್ ಫೋಗಟ್ ಇಂದು ಭಾರತಕ್ಕೆ ಮರಳಿದ್ದಾರೆ. ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಕ್ರೀಡಾಭಿಮಾನಿಗಳು ಅದ್ದೂರಿಯಿಂದ ಸ್ವಾಗತಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಲೇ ಭಾವುಕರಾದ ವಿನೇಶ್ ಫೋಗಟ್ ಕಣ್ಣೀರಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು ಅವರನ್ನು ಸಮಾಧಾನಪಡಿಸಿದ್ದಾರೆ. ಇದಕ್ಕೂ ಮೊದಲು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಹಾಕಿದ್ದ ವಿನೇಶ್ ಪೋಗಟ್ ಸಮಯ ಸರಿಯಾಗಿರಲಿಲ್ಲ ಎಂದಿದ್ದರು.
ಪ್ಯಾರಿಸ್ ಒಲಂಪಿಕ್ಸ್ ನಲ್ಲಿ 50 ಕೆಜಿ ವಿಭಾಗದ ಕುಸ್ತಿ ಇವೆಂಟ್ ನಲ್ಲಿ ಭಾಗವಹಿಸಿದ್ದ ಅವರು ಕಳೆದ ಬಾರಿಯ ಚಿನ್ನದ ಪದಕ ವಿಜೇತೆಯನ್ನು ಮಣಿಸಿ ಫೈನಲ್ ಪ್ರವೇಶಿಸಿದ್ದರು. ಆದರೆ ತೂಕ ಹೆಚ್ಚಾಯಿತು ಎಂಬ ಕಾರಣಕ್ಕೆ ಅನರ್ಹಗೊಂಡಿದ್ದು ಇದನ್ನು ಪ್ರಶ್ನಿಸಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯ ಇಲಾಖೆ ಮೇಲ್ಮನವಿ ಸಲ್ಲಿಸಿದ್ದರೂ ಅದನ್ನು ತಿರಸ್ಕರಿಸಲಾಗಿತ್ತು. ಹೀಗಾಗಿ ಚಿನ್ನದ ಪದಕ ಗೆಲ್ಲಬಹುದೆಂಬ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಅನರ್ಹತೆಯ ಕಾರಣಕ್ಕೆ ಬರಿಗೈಯಲ್ಲಿ ಭಾರತಕ್ಕೆ ಮರಳಿದ್ದಾರೆ.
VINESH PHOGAT in tears after the huge reception from the family, mates & fans at Delhi. ❤️ pic.twitter.com/Rk46khX5oz
— Johns. (@CricCrazyJohns) August 17, 2024