BIG NEWS: ಖೇಲ್ ರತ್ನ, ಅರ್ಜುನ ಪ್ರಶಸ್ತಿ ಹಿಂದಿರುಗಿಸಲು ಪ್ರಧಾನಿ ಕಚೇರಿಗೆ ಹೋಗದಂತೆ ತಡೆದಿದ್ದಕ್ಕೆ ರಸ್ತೆಯಲ್ಲೇ ಇಟ್ಟ ವಿನೇಶ್ ಫೋಗಟ್

ನವದೆಹಲಿ: ಬಹು ವಿಶ್ವ ಚಾಂಪಿಯನ್‌ ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು ಶನಿವಾರ ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ. ದೆಹಲಿ ಪೊಲೀಸರು ಅವರನ್ನು ಪ್ರಧಾನಿ ಕಚೇರಿಗೆ ತಲುಪದಂತೆ ತಡೆದ ನಂತರ ಎರಡು ಪ್ರಶಸ್ತಿಗಳನ್ನು ಕರ್ತವ್ಯ ಪಥದ ಮಧ್ಯದಲ್ಲಿ ಇರಿಸಿದ್ದಾರೆ.

ಕುಸ್ತಿಪಟುಗಳು ನ್ಯಾಯ ಪಡೆಯಲು ಹೆಣಗಾಡುತ್ತಿರುವ ಸಮಯದಲ್ಲಿ ಇಂತಹ ಗೌರವಗಳು ಅರ್ಥಹೀನವಾಗಿವೆ ಎಂದು ಅವರು ಹೇಳಿದ್ದಾರೆ. ಫೋಗಟ್ ಅವರು ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು.

ಶನಿವಾರ ಅವರು ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸಲು ಪ್ರಧಾನಿ ಕಚೇರಿಯನ್ನು ತಲುಪಲು ಪ್ರಯತ್ನಿಸಿದರು. ಆದರೆ, ಪೊಲೀಸರು ಅವರನ್ನು ತಡೆದರು. ಪ್ರತಿಭಟನೆಯ ಸಂಕೇತವಾಗಿ ಅವರು ಕರ್ತವ್ಯ ಪಥದಲ್ಲಿ ಪ್ರಶಸ್ತಿಗಳನ್ನು ಇಟ್ಟಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರೊಂದಿಗೆ ಫೋಗಟ್, ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರ ಆಯ್ಕೆಯನ್ನು ವಿರೋಧಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read