ರೇಣುಕಾಸ್ವಾಮಿ ಕುಟುಂಬ ಭೇಟಿಯಾಗಿ ಧನಸಹಾಯ ಮಾಡಿದ ನಟ ವಿನೋದ್ ರಾಜ್

ಚಿತ್ರದುರ್ಗ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ವಿನೋದ್ ರಾಜ್, ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಕೆಲ ದಿನಗಳ ಹಿಂದೆ ವಿನೋದ್ ರಾಜ್ ಭೇಟಿಯಾಗಿದ್ದರು. ಇಂದು ಚಿತ್ರದುರ್ಗಕ್ಕೆ ತೆರಳಿರುವ ವಿನೋದ್ ರಾಜ್, ಮೃತ ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಇದೇ ವೇಳೆ ರೇಣುಕಾಸ್ವಾಮಿ ಕುಟುಂಬಕ್ಕೆ 1 ಲಕ್ಷ ರೂಪಾಯಿ ಧನ ಸಹಾಯ ಮಾಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಡಿದ್ದ ನಟ ವಿನೋದ್ ರಾಜ್, ಮನೆಗೆ ಆಧಾರಸ್ತಂಭವಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬ ಕಣ್ಣೀರಲ್ಲಿ ಪರಿತಪಿಸುತ್ತಿದೆ. ಅವರ ಸ್ಥಿತಿ ನೋಡಿದರೆ ಕರುಳು ಕಿತ್ತುಬರುತ್ತದೆ. ನಾವು ಮನುಷ್ಯರಾಗಿದ್ದೇವಾ ಎಂದು ಮುಟ್ಟಿ ನೋಡಿಕೊಳ್ಳುವ ಕಾಲ ಇದು…. ಪ್ರತಿಯೊಂದು ಜೀವಿಗೂ ಜೀವವಿದೆ…. ಮಕ್ಕಳು ಬಾಳಬೇಕು, ಬೆಳೆದು ಬೆಳಕಾಗಬೇಕು ಅಂತ ತಂದೆ-ತಾಯಿ ಬೆಳೆಸುತ್ತಾರೆ. ಆದರೆ ಸಮಾಜದಲ್ಲಿ ಕೆಟ್ಟದ್ದು ಹೆಚ್ಚಾದಾಗ ಇಂತಹ ಕೃತ್ಯಗಳು ನಡೆಯುತ್ತವೆ. ಹೀಗಾಗದಂತೆ ಎಚ್ಚೆತ್ತುಕೊಳ್ಳಬೇಕು. ಕಲಾವಿದರನ್ನು ನೋಡಿ ಜನರು ಅನುಕರಣೆ ಮಾಡುತ್ತಾರೆ. ಇಂತಹ ಘಟನೆ ನಡೆದಿರುವುದು ಆಘಾತಕಾರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೆಸರು, ಕೀರ್ತಿಯಲ್ಲಿರುವ ನಾವು ಎಚ್ಚರವಾಗಿರಬೇಕು. ಉನ್ನತ ಸ್ಥಾನ, ಎತ್ತರದ ಮಟ್ಟದಲ್ಲಿರುವ ನಾವು ವಿವೇಕ ಮರೆಯಬಾರದು. ಅಚಾತುರ್ಯ ನಡೆಯುತ್ತವೆ. ಆದರೆ ಮುಂದಿನ ತಲೆಮಾರುಗಳು ಹೀಗೆ ಆಗದಂತೆ ಎಚ್ಚರವಹಿಸಬೇಕು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read