ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೇಂದ್ರ ಸರ್ಕಾರದ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆಯೋಜಿಸಿದ್ದ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.
ಪತ್ರದ ಸಾರಾಂಶ ಹೀಗಿದೆ;
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಅಂಬಾರಗೋಡ್ಲು – ಕಳಸವಳ್ಳಿ ಸೇತುವೆ ಉದ್ಘಾಟನೆಯೂ ಸೇರಿದಂತೆ ಹಲವು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
ರಾಜ್ಯ ಸರ್ಕಾರವನ್ನು ಸಂಪರ್ಕಿಸದೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಮಾತ್ರವಲ್ಲ, ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ವಿಷಯವನ್ನು ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಕೂಡ ಮುದ್ರಿಸಲಾಗಿತ್ತು.
ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕುವುದರಿಂದ ಹಿಡಿದು ಆಹ್ವಾನ ನೀಡುವ ವರೆಗೆ ಎಲ್ಲಾ ಹಂತಗಳಲ್ಲಿಯೂ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷಕ್ಕೆ ಕಾರಣವಾಗಬಹುದಾದ ಈ ನಡೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು.
ಇದನ್ನು ರಾಜ್ಯ ಸರ್ಕಾರವು ಬಲವಾಗಿ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ ಲೋಪಗಳಾಗದಂತೆ ತಮ್ಮ ಎಲ್ಲಾ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುತ್ತೀರೆಂದು ನಾನು ಭಾವಿಸಿದ್ದೇನೆ ಎಂದು ಸಿಎಂ ಪತ್ರದಲ್ಲಿ ತಿಳಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೇಂದ್ರ ಸರ್ಕಾರದ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆಯೋಜಿಸಿದ್ದ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿರುವ ಬಗ್ಗೆ ಪ್ರಧಾನಿ @narendramodi ಅವರಿಗೆ ಪತ್ರ ಬರೆದಿದ್ದೇನೆ.
— Siddaramaiah (@siddaramaiah) July 14, 2025
ನನ್ನ ಪತ್ರದ ಸಾರಾಂಶ ಹೀಗಿದೆ;
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ… pic.twitter.com/nAb5ftF0K6