HomeKarnatakaಕಂತು ಪಾವತಿಸಿದರೂ ವಿಮಾ ಪಾಲಿಸಿ ಪುನರಾರಂಭಿಸದ ಕಂಪನಿಗೆ ದಂಡ: ಗ್ರಾಹಕ ಆಯೋಗ ಆದೇಶ

ಕಂತು ಪಾವತಿಸಿದರೂ ವಿಮಾ ಪಾಲಿಸಿ ಪುನರಾರಂಭಿಸದ ಕಂಪನಿಗೆ ದಂಡ: ಗ್ರಾಹಕ ಆಯೋಗ ಆದೇಶ

ಶಿವಮೊಗ್ಗ : ನಿಯಮಾನುಸಾರ ಕಂತು ಪಾವತಿಸಿದರೂ ಜೀವ ವಿಮಾ ಪಾಲಿಸಿಯನ್ನು ಪುನರಾರಂಭಿಸದೆ ಸೇವಾ ನ್ಯೂನತೆ ಎಸಗಿದ ಮುಂಬೈನ ಐಸಿಐಸಿಐ ಪ್ರುಡೆನ್ಷಿಯಲ್ ಇನ್ಶೂರೆನ್ಸ್ ಕಂಪನಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ಹಾಗೂ ಪರಿಹಾರ ಪಾವತಿಸುವಂತೆ ಆದೇಶಿಸಿದೆ.

ಶಿವಮೊಗ್ಗದ ಹಳೇಬಾರ್ ರಸ್ತೆಯ ನಿವಾಸಿ ನಾಗರಾಜ ಎಂಬುವರು ಐಸಿಐಸಿಐ ಬ್ಯಾಂಕ್ ಮೂಲಕ ಐಸಿಐಸಿಐ ಪ್ರುಡೆನ್ಷಿಯಲ್ ಇನ್ಶೂರೆನ್ಸ್ ಕಂಪನಿಯ ಜೀವ ವಿಮಾ ಪಾಲಿಸಿಯನ್ನು (ಅವಧಿ: 30/06/2019 ರಿಂದ 30/06/2046, ವಾರ್ಷಿಕ ಕಂತು: ರೂ.65,460) ಪಡೆದುಕೊಂಡಿದ್ದರು. 2024 ರ ಕಂತು ಪಾವತಿಯಾಗದಿರುವುದನ್ನು ಗಮನಿಸಿ, ದಂಡ ಸಹಿತ ರೂ.82,467 ಗಳನ್ನ 2025 ರ ಮೇ 7 ರಂದು ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದರು. ತದನಂತರ 2025 ರ ಜುಲೈ 9 ರಂದು ಕಂತು ರೂ. 78,688 ಗಳನ್ನು ಪಾವತಿಸಿ, ಪಾಲಿಸಿಯನ್ನು ಪುನರಾರಂಭಿಸಲು (ರಿವೈವಲ್) ಕೋರಿದ್ದರು.

ಕಂಪನಿಯ ಸೂಚನೆಯಂತೆ ಅಧಿಕೃತ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಿ ವರದಿ ನೀಡಿದರೂ, ವಿಮಾ ಕಂಪನಿಯು ಯಾವುದೇ ಪ್ರತಿಕ್ರಿಯೆ ನೀಡದೆ ಪಾಲಿಸಿಯನ್ನು ಪುನರಾರಂಭಿಸಿರಲಿಲ್ಲ. ನೋಟೀಸ್ ನೀಡಿದರೂ ಸ್ಪಂದಿಸದ ಕಾರಣ ದೂರುದಾರರು ವಕೀಲರ ಮೂಲಕ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯೋಗದ ಆದೇಶ:

ಉಭಯ ಪಕ್ಷಕಾರರ ವಾದ-ವಿವಾದಗಳನ್ನು ಆಲಿಸಿದ ಆಯೋಗವು, ವಿಮಾ ಕಂಪನಿಯು ಸೇವಾ ನ್ಯೂನತೆ ಎಸಗಿರುವುದು ಸಾಬೀತಾಗಿದೆ ಎಂದು ತೀರ್ಮಾನಿಸಿ ಈ ಕೆಳಗಿನಂತೆ ಆದೇಶಿಸಿದೆ:

2ನೇ ಎದುರುದಾರರಾದ ಐಸಿಐಸಿಐ ಪ್ರುಡೆನ್ಷಿಯಲ್ ಇನ್ಶೂರೆನ್ಸ್ ಕಂಪನಿಯು ದೂರುದಾರರಿಂದ ಬರಬೇಕಾದ ವಿಮಾ ಕಂತಿನ ಮೊತ್ತವನ್ನು ಪಡೆದು 45 ದಿನಗಳ ಒಳಗಾಗಿ ಪಾಲಿಸಿಯನ್ನು ಪುನರಾರಂಭಿಸಬೇಕು. ತಪ್ಪಿದಲ್ಲಿ, ಪಾಲಿಸಿ ಪುನರಾರಂಭಿಸುವವರೆಗೆ ಪ್ರತಿದಿನ ರೂ.100 ರಂತೆ ದೂರುದಾರರಿಗೆ ಪಾವತಿಸಬೇಕು. ಹಾಗೂ ಮಾನಸಿಕ ಹಿಂಸೆಗೆ ರೂ.30,000 ಹಾಗೂ ದೂರಿನ ಖರ್ಚುವೆಚ್ಚಕ್ಕಾಗಿ ರೂ.10,000 ಗಳನ್ನು 45 ದಿನಗಳ ಒಳಗಾಗಿ ದೂರುದಾರರಿಗೆ ಪಾವತಿಸಬೇಕು.

ನಿಗದಿತ 45 ದಿನಗಳೊಳಗೆ ಮೊತ್ತ ಪಾವತಿಸದಿದ್ದರೆ ಶೇ. 10 ರಷ್ಟು ಬಡ್ಡಿ ಸೇರಿಸಿ ಪೂರ್ತಿ ಹಣ ಪಾವತಿಸಬೇಕಾಗುತ್ತದೆ. 1ನೇ ಎದುರುದಾರರಾದ ಐಸಿಐಸಿಐ ಬ್ಯಾಂಕ್ ವಿರುದ್ಧದ ದೂರನ್ನು ವಜಾಗೊಳಿಸಲಾಗಿದೆ.

ಈ ಆದೇಶವನ್ನು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಹಾಗೂ ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಅವರನ್ನೊಳಗೊಂಡ ಪೀಠವು ದಿನಾಂಕ 12/10/2026 ರಂದು ಹೊರಡಿಸಿದೆ.

ವಸತಿ ನಿಲಯಗಳ ನೋಂದಣಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ನಿಲಯಗಳ ನೋಂದಣಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅನ್ವಯಿಸುವ ವಸತಿ ನಿಲಯಗಳು: ಸರ್ಕಾರಿ, ಸರ್ಕಾರೇತರ, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ ಹಾಗೂ ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ ಮತ್ತು ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯಗಳಿಗೆ (ಸ್ಟ್ಯಾಂಡ್-ಅಲೋನ್ ಹಾಸ್ಟೆಲ್‌ಗಳು, ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳು ಮತ್ತು ವಸತಿ ಶಾಲೆಗಳು) ಈ ನಿಯಮ ಅನ್ವಯಿಸುತ್ತದೆ.

ಅಧಿಕೃತ ವೆಬ್‌ಸೈಟ್ https://shivamogga.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸಂಬಂಧಿತ ಕಚೇರಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಮಾರ್ಗಸೂಚಿಯನ್ವಯ 31/10/2026 ರೊಳಗೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.

ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರನ್ನು ಅಥವಾ ದೂರವಾಣಿ ಸಂಖ್ಯೆ 08182-295514 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular