ಬೆಂಗಳೂರು: ನೇಪಾಳ ರಾಜಧಾನಿ ಕಠ್ಮಂಡು ಸೇರಿದಂತೆ ಹಲವು ಕಡೆ ಹಿಂಸಾಚಾರ ಭುಗಿಲೆದ್ದಿದ್ದು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಈ ಕುರಿತಾಗಿ ಸಿಎಂ ಸೂಚನೆ ನೀಡಿದ್ದು, ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಿಎಸ್ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚಿಸಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಂಡಿದ್ದಾರೆ.