HomeAgricultureFACT CHECK : ಪಿಎಂ ಕಿಸಾನ್ ಹಣ ₹10 ಸಾವಿರಕ್ಕೆ ಹೆಚ್ಚಳ? ಇಲ್ಲಿದೆ ವೈರಲ್ ಸುದ್ದಿಯ...

FACT CHECK : ಪಿಎಂ ಕಿಸಾನ್ ಹಣ ₹10 ಸಾವಿರಕ್ಕೆ ಹೆಚ್ಚಳ? ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು

ದೇಶದ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗಳಿಗೆ ಹಣ ಜಮೆ ಮಾಡಲಾಗುತ್ತಿದೆ. ಈ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ ಒಟ್ಟು ₹6,000 ಹಣವನ್ನು ಮೂರು ಸಮಾನ ಕಂತುಗಳಲ್ಲಿ ತಲಾ ₹2,000ರಂತೆ ನೀಡಲಾಗುತ್ತದೆ.ಈಗಾಗಲೇ ಕೇಂದ್ರ ಸರ್ಕಾರ 23 ಕಂತುಗಳ ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡಿದೆ. ಇದೀಗ 24ನೇ ಕಂತಿನ ಹಣ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ.

ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್ ಬರುತ್ತೆ ಎಂಬ ನಿರೀಕ್ಷೆ ನಡುವೆ, ಪಿಎಂ ಕಿಸಾನ್ ಹಣ ₹6 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಳವಾಗಲಿದೆ ಎಂಬ ಸುದ್ದಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ವದಂತಿಗೆ ಕೇಂದ್ರ ಸರ್ಕಾರವೇ ತೆರೆ ಎಳೆದಿದ್ದು, 24ನೇ ಕಂತಿನ ಹಣದ ಕುರಿತು ರೈತರಿಗೆ ಮಹತ್ವದ ಸ್ಪಷ್ಟನೆ ನೀಡಿದೆ.

ಪಿಎಂ ಕಿಸಾನ್ ಹಣ ₹10 ಸಾವಿರಕ್ಕೆ ಹೆಚ್ಚಳ?

ಈ ನಡುವೆ ಪಿಎಂ ಕಿಸಾನ್ ಯೋಜನೆಯಡಿ ನೀಡಲಾಗುವ ವಾರ್ಷಿಕ ಆರ್ಥಿಕ ನೆರವನ್ನು ₹6,000ರಿಂದ ₹10,000ಕ್ಕೆ ಹೆಚ್ಚಿಸಲಾಗುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಕೇಂದ್ರ ಸರ್ಕಾರ ಇದೀಗ ಸ್ಪಷ್ಟನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಎಂ ಕಿಸಾನ್‌ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ₹10 ಸಾವಿರಕ್ಕೆ ಹೆಚ್ಚಳ ಮಾಡುವ ಕುರಿತು ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು ಎಂದು ತಿಳಿಸಿದೆ. ಇಂತಹ ಸುದ್ದಿಗಳು ರೈತರನ್ನು ದಾರಿ ತಪ್ಪಿಸುವ ಉದ್ದೇಶ ಹೊಂದಿವೆ ಎಂದು ಸ್ಪಷ್ಟಪಡಿಸಿದೆ.

ಈ ಹಿಂದಿನಂತೆಯೇ ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ ₹6,000 ಮಾತ್ರ ನೀಡಲಾಗುತ್ತದೆ. ಈ ಮೊತ್ತವನ್ನು ಮೂರು ಸಮಾನ ಕಂತುಗಳಲ್ಲಿ, ಪ್ರತಿ ಕಂತಿಗೆ ₹2,000ರಂತೆ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಪಿಎಂ ಕಿಸಾನ್ ಹಣ ಹೆಚ್ಚಳದಂತಹ ಸುದ್ದಿಗಳನ್ನು ನಂಬದಂತೆ ರೈತರಿಗೆ ಸೂಚಿಸಲಾಗಿದೆ.

24ನೇ ಕಂತಿನ ಹಣ ಯಾವಾಗ?

ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣವನ್ನು ಯಾವ ದಿನ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಕೇಂದ್ರ ಸರ್ಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ.

ಮಳೆ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ರೈತರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ 24ನೇ ಕಂತಿನ ಹಣಕ್ಕಾಗಿ ದೇಶದ ರೈತರು ಎದುರು ನೋಡುತ್ತಿದ್ದಾರೆ. ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ರೈತರು ಕೇಂದ್ರದ ಪಿಎಂ ಕಿಸಾನ್ ನೆರವಿನ ಜೊತೆಗೆ ರಾಜ್ಯ ಸರ್ಕಾರಗಳ ರೈತಪರ ಯೋಜನೆಗಳ ಹಣಕ್ಕಾಗಿ ಕಾಯುತ್ತಿದ್ದಾರೆ.

ಸದ್ಯಕ್ಕೆ ₹6,000 ವಾರ್ಷಿಕ ನೆರವನ್ನು ₹10,000ಕ್ಕೆ ಹೆಚ್ಚಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂಬುದು ಕೇಂದ್ರದ ಸ್ಪಷ್ಟನೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular