HomeIndiaViral Video | ಒಬ್ಬಳಿಗಾಗಿ ವಿವಿ ಕ್ಯಾಂಪಸ್ ನಲ್ಲೇ ವಿದ್ಯಾರ್ಥಿಗಳ 'ಫೈಟ್'

Viral Video | ಒಬ್ಬಳಿಗಾಗಿ ವಿವಿ ಕ್ಯಾಂಪಸ್ ನಲ್ಲೇ ವಿದ್ಯಾರ್ಥಿಗಳ ‘ಫೈಟ್’

ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಅಮಿಟಿ ವಿಶ್ವವಿದ್ಯಾಲಯ ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಈ ಹಿಂದೆ ವಿವಿ ಆವರಣದಲ್ಲಿಯೇ ವಿದ್ಯಾರ್ಥಿ – ವಿದ್ಯಾರ್ಥಿನಿ ಅಸಭ್ಯ ವರ್ತನೆ ತೋರಿದ ವಿಡಿಯೋ ವೈರಲ್ ಆಗಿದ್ದರೆ, ಈಗ ಒಬ್ಬ ವಿದ್ಯಾರ್ಥಿನಿಗಾಗಿ ವಿದ್ಯಾರ್ಥಿಗಳ ಎರಡು ಗುಂಪು ಬಡಿದಾಡಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿದಾಡುತ್ತಿದೆ.

ವಿಶ್ವವಿದ್ಯಾಲಯದ ಕ್ಲಾಸ್ ರೂಮ್ ಎದುರುಗಡೆಯೇ ಈ ಮಾರಾಮಾರಿ ನಡೆದಿದ್ದು, ಓರ್ವ ವಿದ್ಯಾರ್ಥಿನಿ ಸಲುವಾಗಿ ಎರಡು ವಿದ್ಯಾರ್ಥಿ ಗುಂಪಿನ ನಡುವೆ ಹಲವು ದಿನಗಳಿಂದ ನಡೆಯುತ್ತಿದ್ದ ಶೀತಲ ಸಮರವೇ ಇದಕ್ಕೆ ಕಾರಣವೆಂದು ಹೇಳಲಾಗಿದೆ. ಈ ಫೈಟ್ ನಡೆಯುತ್ತಿದ್ದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾನೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಲೇ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮೂವರು ವಿದ್ಯಾರ್ಥಿಗಳನ್ನು ಅಮಾನತು ಮಾಡಿ ಆದೇಶಿಸಿದೆ. ಇದರ ಮಧ್ಯೆ ವಿದ್ಯಾರ್ಥಿಗಳ ನಡುವೆ ನಡೆದ ಈ ಮಾರಾಮಾರಿ ವಿಡಿಯೋ ಗಮನಿಸಿರುವ ಪೊಲೀಸರು ಕೂಡ ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ವಿವಿ ಕ್ಯಾಂಪಸ್ ನಲ್ಲಿಯೇ ಈ ಘಟನೆ ನಡೆದಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಪೋಷಕರು ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular