HomeIndiaರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛತೆ; ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಬಹಿರಂಗ

ರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛತೆ; ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಬಹಿರಂಗ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬ ರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛ ಮಾಡಿರುವ ವಿಡಿಯೋ ಹರಿದಾಡುತ್ತಿತ್ತು. ಆತ ಟೇಬಲ್ ಮೇಲೆ ಇಟ್ಟಿದ್ದ ರಾಷ್ಟ್ರಧ್ವಜವನ್ನು ತೆಗೆದುಕೊಂಡು ತನ್ನ ಮುಖ ಒರೆಸಿಕೊಳ್ಳುವುದಲ್ಲದೆ ಬಳಿಕ ಚೇರ್ ಹಾಗೂ ಟೇಬಲ್ ಸ್ವಚ್ಛ ಮಾಡಿದ್ದ. ಇದಾದ ಬಳಿಕ ಧ್ವಜವನ್ನು ಕೆಳಗೆ ಎಸೆದಿದ್ದ.

ಈ ಘಟನೆ ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿ ಬಿಡಲಾಗಿದ್ದು, ನೆಟ್ಟಿಗರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ವ್ಯಕ್ತಿ ವಿರುದ್ಧ ತಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ಆತನನ್ನು ಬಂಧಿಸಿ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗ ಈ ಕುರಿತಂತೆ ತನಿಖೆ ನಡೆಸಿರುವ ಕೇರಳ ಪೊಲೀಸರು ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಅಸಲಿ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಘಟನೆ ನಡೆದಿರುವುದು ಒಡಿಶಾದ ಪುರಿ ಜಿಲ್ಲೆಯ ಸಿಮಿಲಿ ಗ್ರಾಮ ಪಂಚಾಯಿತಿಯಲ್ಲಿ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ ಈ ಕುರಿತು ಅಲ್ಲಿನ ಪೊಲೀಸರಿಗೆ ಮಾಹಿತಿಯನ್ನೂ ಸಹ ನೀಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular