HomeKarnatakaಕೈದಿಗಳ ಜೊತೆ ಮಹಿಳಾ ಪೊಲೀಸ್ ಅಧಿಕಾರಿಯಿಂದ ಅರೆಬೆತ್ತಲೆ ವಿಡಿಯೋ ಕಾಲ್ ಕೇಸ್: ವಿಡಿಯೋ ವೈರಲ್ ಮಾಡಿದವರ...

ಕೈದಿಗಳ ಜೊತೆ ಮಹಿಳಾ ಪೊಲೀಸ್ ಅಧಿಕಾರಿಯಿಂದ ಅರೆಬೆತ್ತಲೆ ವಿಡಿಯೋ ಕಾಲ್ ಕೇಸ್: ವಿಡಿಯೋ ವೈರಲ್ ಮಾಡಿದವರ ವಿರುದ್ಧ ದೂರು ದಾಖಲು

ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ಅರೆಬೆತ್ತಲಾಗಿ ವಿಡಿಯೋ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಪೊಲೀಸ್ ಇಲಾಖೆಯನ್ನೇ ಮುಜುಗರಕ್ಕೀಡು ಮಾಡಿರುವ ಈ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ವಿಡಿಯೋನಲ್ಲಿರುವ ಪೊಲೀಸ್ ಅಧಿಕಾರಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಡಿಯೋ ವೈರಲ್ ಮಾಡಿದ್ದವರ ಇಬ್ಬರು ಹೆಸರುಗಳನ್ನು ಉಲ್ಲೇಖಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳಾ ಅಧಿಕಾರಿ ದೂರು ದಾಖಲಿಸಿದ್ದಾರೆ.

ರೌಡಿಶೀಟರ್​ ಸಾಯಿಕುಮಾರ್ ವಿಡಿಯೋ ವೈರಲ್ ಮಾಡಿದ್ದಾನೆ. ಕೆಲ ವರ್ಷಗಳ ಹಿಂದೆ ರೌಡಿಶೀಟರ್​ ಧರ್ಮ ಜೊತೆ ಆತ್ಮೀಯವಾಗಿದ್ದೆ. ವಿಡಿಯೋ ಕಾಲ್​ನಲ್ಲಿ ಧರ್ಮ ಜೊತೆ ಮಾತಾಡಿದ್ದಾಗ ಆತನೇ ರೆಕಾರ್ಡ್ ಮಾಡಿಕೊಂಡಿದ್ದಾನೆ. ಬಳಿಕ ವಿಡಿಯೋವನ್ನು ರೌಡಿಶೀಟರ್ ಸಾಯಿಕುಮಾರ್​​ಗೆ ಕೊಟ್ಟು ವೈರಲ್‌ ಮಾಡಿಸಿದ್ದಾನೆ. ಹೀಗಾಗಿ ಇವರಿಬ್ಬರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮಹಿಳಾ ಅಧಿಕಾರಿ ಉಲ್ಲೇಖಸಿದ್ದಾರೆ.

ನಾನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಉಸ್ತುವಾರಿ ಅಧಿಕಾರಿಯಾಗಿದ್ದೇನೆ. ನನಗೆ ಮದುವೆಯಾಗಿ ಮಕ್ಕಳಿದ್ದಾರೆ, ಸಮಾಜದಲ್ಲಿ ಒಳ್ಳೆಯ ಹೆಸರಿದೆ. ವಿಡಿಯೋ ವೈರಲ್ ಮಾಡಿ ನನ್ನ ಘನತೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ರೌಡಿಶೀಟರ್​ಗಳಾದ​​ ಧರ್ಮ, ಸಾಯಿಕುಮಾರ್ ಹಾಗೂ ಇತರರ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಿದ್ದಾರೆ. ಮಹಿಳಾ ಅಧಿಕಾರಿ ನೀಡಿರುವ ಈ ದೂರಿನ ಮೇರೆಗೆ ಕಬ್ಬನ್ ಪಾರ್ಕ್ ಪೊಲೀಸರು ಎನ್​​ಸಿಆರ್ ದಾಖಲಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular