HomeIndiaಟೀಮ್ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ ದಾಖಲೆ

ಟೀಮ್ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ ದಾಖಲೆ

ಆಂಟಿಗುವಾ: ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ವಿಶ್ವಕಪ್ ಸೂಪರ್ 8ರ  ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಭಾರತದ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ.

ಟಿ20 ಮತ್ತು ಏಕದಿನ ವಿಶ್ವಕಪ್ ಎರಡರಿಂದ 3000 ರನ್ ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೊಸ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದಾರೆ. ಬಾಂಗ್ಲಾದೇಶ ಎದುರಿನ ಸೂಪರ್ 8ರ ಪಂದ್ಯದಲ್ಲಿ 37 ರನ್ ಗಳಿಸಿದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಈ ಮೈಲುಗಲ್ಲು ಸ್ಥಾಪಿಸಿದ್ದಾರೆ.

ಅವರು 32 ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಗರಿಷ್ಠ 89 ಸೇರಿ 1207 ರನ್ ಗಳಿಸಿದ್ದಾರೆ. 37 ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ ಗರಿಷ್ಠ 117 ಸೇರಿದಂತೆ 1795 ರನ್ ಗಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular