HomeIndiaಮೊದಲ ಪಂದ್ಯದಲ್ಲೇ RCB ಮುಗ್ಗರಿಸಿದರೂ ವಿರಾಟ್ ಕೊಹ್ಲಿ ಭರ್ಜರಿ ದಾಖಲೆ

ಮೊದಲ ಪಂದ್ಯದಲ್ಲೇ RCB ಮುಗ್ಗರಿಸಿದರೂ ವಿರಾಟ್ ಕೊಹ್ಲಿ ಭರ್ಜರಿ ದಾಖಲೆ

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 17 ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆರು ವಿಕೆಟ್ ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಶುಭಾರಂಭ ಮಾಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಗೆಲುವಿನ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 18.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿದೆ.

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ 12 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಚೆಪಾಕ್ ನಲ್ಲಿ ಚೆನ್ನೈ ಎದುರಿನ ಪಂದ್ಯದಲ್ಲಿ 6 ರನ್ ಗಳಿಸಿದ ನಂತರ ಕೊಹ್ಲಿ ಈ ಸಾಧನೆ ಮಾಡಿದರು. ಪಂದ್ಯದಲ್ಲಿ 21 ರನ್ ಗಳಿಗೆ ಅವರು ಔಟ್ ಆಗಿದ್ದಾರೆ. 377 ಪಂದ್ಯಗಳ 360 ಇನಿಂಗ್ಸ್ ಗಳಲ್ಲಿ ವಿರಾಟ್ ಕೊಹ್ಲಿ ಈ ಮೈಲುಗಲ್ಲು ಸ್ಥಾಪಿಸಿದ್ದಾರೆ. ಇದರಲ್ಲಿ 8 ಶತಕ 91 ಅರ್ಧ ಶತಕ ಸೇರಿವೆ. ಪ್ರಸ್ತುತ ಅವರು ಟಿ20 ಕ್ರಿಕೆಟ್ ನಲ್ಲಿ 12,015 ರನ್ ಗಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ರಿಸ್ ಗೇಲ್ 345 ಇನ್ನಿಂಗ್ಸ್ ಗಳಲ್ಲಿ 12,000 ರನ್ ಗಳಿಸಿ ಟಿ20 ಕ್ರಿಕೆಟ್ ನಲ್ಲಿ ದಾಖಲೆ ಬರೆದಿದ್ದಾರೆ. ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಎರಡು ತಂಡಗಳ ವಿರುದ್ಧ 1000ಕ್ಕೂ ಅಧಿಕ ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ 15 ರನ್ ಗಳಿಸುವುದರೊಂದಿಗೆ ಸಿಎಸ್ಕೆ ವಿರುದ್ಧ 1000 ರನ್ ಕಲೆ ಹಾಕಿದ ವಿಶೇಷ ಸಾಧನೆ ಮಾಡಿದ್ದಾರೆ. ಇದಕ್ಕಿಂತ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಕೊಹ್ಲಿ 1000 ರನ್ ಪೂರೈಸಿ ದಾಖಲೆ ಬರೆದಿದ್ದರು. ಈಗ ಐಪಿಎಲ್ ನಲ್ಲಿ ಎರಡು ತಂಡಗಳ ವಿರುದ್ಧ ಸಾವಿರಕ್ಕೂ ಅಧಿಕ ರನ್ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular