ಕೊಹ್ಲಿ ಹುಟ್ಟುಹಬ್ಬಕ್ಕೆ ಕೇಕ್ ಸಿದ್ದ – ಶತಕ ಸಿಡಿಸುವ ನಿರೀಕ್ಷೆಯಲ್ಲಿ ಅಭಿಮಾನಿಗಳು

ಟೀಂ ಇಂಡಿಯಾದ ಸ್ಟಾರ್‌ ಬ್ಯಾಟ್ಸ್ಮೆನ್‌, ಅದ್ಬುತ ಆಟಗಾರ, ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಮಿಂಚುತ್ತಿರುವ ವಿರಾಟ್‌ ಕೊಹ್ಲಿ ಹುಟ್ಟುಹಬ್ಬ ಹತ್ತಿರ ಬರ್ತಿದೆ. ನವೆಂಬರ್ 5 ರಂದು ವಿರಾಟ್ ಕೊಹ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಭಾರತದ ಮಾಜಿ ನಾಯಕ 35 ನೇ ವರ್ಷಕ್ಕೆ ಕಾಲಿಡ್ತಿದ್ದಾರೆ.

ವಿರಾಟ್‌ ಕೊಹ್ಲಿ ಹುಟ್ಟುಹಬ್ಬದ ದಿನ ನವೆಂಬರ್ 5 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ವಿಶ್ವಕಪ್ ಪಂದ್ಯ ನಡೆಯಲಿದೆ. ಈ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿದೆ. ವಿರಾಟ್‌ ಕೊಹ್ಲಿ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ‌ಬೆಂಗಾಲ್ ಕ್ರಿಕೆಟ್ ಸಂಸ್ಥೆ ವಿಶೇಷ ತಯಾರಿ ನಡೆಸಿದೆ.

ವಿರಾಟ್ ಕೊಹ್ಲಿ ಹುಟ್ಟುಹಬ್ಬದಂದು ವಿಶೇಷ ಕೇಕ್ ವ್ಯವಸ್ಥೆ ಮಾಡಲಾಗ್ತಿದೆ. ಮೈದಾನದಲ್ಲಿಯೇ ಕೇಕ್‌ ಕಟ್ಟಿಂಗ್‌ ನಡೆಯುವ ಸಾಧ್ಯತೆಯಿದೆ.

2023ರ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ವಿಶ್ವಕಪ್‌ನಲ್ಲಿ ಇದುವರೆಗೆ ವಿರಾಟ್ ಕೊಹ್ಲಿ 5 ಪಂದ್ಯಗಳಲ್ಲಿ 354 ರನ್ ಗಳಿಸಿದ್ದಾರೆ.

ಹುಟ್ಟುಹಬ್ಬದ ಸಂದರ್ಭದಲ್ಲಿ ಕೊಹ್ಲಿ ಇನ್ನೊಂದು ಸಾಧನೆ ಮಾಡುವ ಸಾಧ್ಯತೆ ಹೆಚ್ಚಿದೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 78 ಶತಕಗಳನ್ನು ಮಾಡಿರುವ ಕೊಹ್ಲಿ ಏಕದಿನ ಕ್ರಿಕೆಟ್‌ ನಲ್ಲಿ 48 ಶತಕ ಸಿಡಿಸಿದ್ದಾರೆ. ಕೊಹ್ಲಿ ತಮ್ಮ ಹುಟ್ಟುಹಬ್ಬದಂದು 50ನೇ ಏಕದಿನ ಶತಕ ಸಿಡಿಸಲಿದ್ದಾರೆ ಎಂದು ಗವಾಸ್ಕರ್ ಭರವಸೆ ವ್ಯಕ್ತಪಡಿಸಿದ್ದಾರೆ. ಸಚಿನ್‌ ತೆಂಡೂಲ್ಕರ್‌ ಏಕದಿನ ಕ್ರಿಕೆಟ್‌ ನಲ್ಲಿ 49 ಶತಕ ಸಿಡಿಸಿದ್ದು, ಕೊಹ್ಲಿ ಅದನ್ನು ಹಿಂದಿಕ್ಕುವ ಕಾತರದಲ್ಲಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಕೊಹ್ಲಿ ಹುಟ್ಟುಹಬ್ಬದ ರಿಟರ್ನ್ ಗಿಫ್ಟ್‌ ಸಿಗುವ ಸಾಧ್ಯತೆಯಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read