HomeLatest Newsವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು: ವಿಶ್ವಕಪ್ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಕೆ ದಾಖಲೆ

ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು: ವಿಶ್ವಕಪ್ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಕೆ ದಾಖಲೆ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ 54 ರನ್ ಗಳಿಸಿದ್ದಾರೆ.

ಕಳೆದ ಸೆಮಿಫೈನಲ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರ 673 ರನ್ ದಾಖಲೆ ಮುರಿದ ವಿರಾಟ್ 711 ರನ್ ಕಲೆ ಹಾಕಿದ್ದರು. ಇಂದು 54 ರನ್ ಸೇರಿಸಿ 765 ರನ್ ಕಲೆ ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸಕ್ತ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ 11 ಇನಿಂಗ್ ಆಡಿದ್ದು, 765 ರನ್ ಗಳಿಸಿದ್ದಾರೆ. ಇದರಲ್ಲಿ 3 ಶತಕ, 6 ಅರ್ಧ ಶತಕ ಸೇರಿವೆ. ವಿಶ್ವಕಪ್ ನ ಒಂದೇ ಆವೃತ್ತಿಯಲ್ಲಿ ಯಾವುದೇ ಆಟಗಾರ ಗಳಿಸಿದ ಅತಿ ಹೆಚ್ಚು ರನ್ ಇದಾಗಿದೆ. ಒಂದೇ ವಿಶ್ವಕಪ್ ನಲ್ಲಿ 765 ರನ್ ಗಳ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಪ್ರಸಕ್ತ ವಿಶ್ವಕಪ್ ನಲ್ಲಿ 9ನೇ 50 ಪ್ಲಸ್ ಸ್ಕೋರ್ ಇದಾಗಿದೆ. ಏಕದಿನದಲ್ಲಿ 72ನೇ ಅರ್ಧಶತಕ ಇದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular