HomeBusinessBIG NEWS: ಅತಿ ಹೆಚ್ಚು ತೆರಿಗೆ ಪಾವತಿಸಿದ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿಗೆ ಅಗ್ರ ಸ್ಥಾನ

BIG NEWS: ಅತಿ ಹೆಚ್ಚು ತೆರಿಗೆ ಪಾವತಿಸಿದ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿಗೆ ಅಗ್ರ ಸ್ಥಾನ

ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಜನರಲ್ಲಿ ಭಾರತವನ್ನು ಪ್ರತಿನಿಧಿಸುವ ಕ್ರಿಕೆಟಿಗರು ಸೇರಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸುವುದು ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಆಡುವುದು ಆಟಗಾರರಿಗೆ ಆದಾಯ ಹೆಚ್ಚಳಕಕ್ಕೆ ಕಾರಣವಾಗಿದೆ.

ಎಂಡೋರ್ಸ್‌ಮೆಂಟ್ ಡೀಲ್‌ಗಳು ಕ್ರಿಕೆಟಿಗರು ದೊಡ್ಡ ಹಣವನ್ನು ಮಾಡುವ ಮತ್ತೊಂದು ಮಾರ್ಗವಾಗಿದೆ. ಫಾರ್ಚೂನ್ ಇಂಡಿಯಾದ ವರದಿಯ ಪ್ರಕಾರ, ವಿರಾಟ್ ಕೊಹ್ಲಿ 2023-24 ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸಿದ ಕ್ರಿಕೆಟಿಗ ಮತ್ತು ಕ್ರೀಡಾಪಟುವಾಗಿ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕುತೂಹಲಕಾರಿಯಾಗಿ ಅವರು ಸಚಿನ್ ತೆಂಡೂಲ್ಕರ್ ಮತ್ತು ಎಂಎಸ್ ಧೋನಿ ಇಬ್ಬರ ತೆರಿಗೆ ಸೇರಿದಷ್ಟು ತೆರಿಗೆಯನ್ನು ಪಾವತಿಸುತ್ತಾರೆ.

ವಿರಾಟ್ ಕೊಹ್ಲಿ 66 ಕೋಟಿ ರೂ. ಪಾವತಿಸುವ ಮೂಲಕ ಕ್ರೀಡಾಪಟುಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 38 ಕೋಟಿ ರೂ. ತೆರಿಗೆ ಪಾವತಿಸಿದ ಎಂ.ಎಸ್. ಧೋನಿ, 28 ಕೋಟಿ ರೂ. ಪಾವತಿಸಿದ ಸಚಿನ್ ತೆಂಡೂಲ್ಕರ್ ೆರಡನೇ ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೌರವ್ ಗಂಗೂಲಿ 23 ಕೋಟಿ ರೂ., ಹಾರ್ದಿಕ್ ಪಾಂಡ್ಯ (12 ಕೋಟಿ) ಮತ್ತು ರಿಷಬ್ ಪಂತ್ (10 ಕೋಟಿ) ನಂತರದ ಸ್ಥಾನಗಳಲ್ಲಿದ್ದಾರೆ.

FY 2023-24 ಕ್ಕೆ ಹೆಚ್ಚು ತೆರಿಗೆ ಪಾವತಿಸಿದ ಭಾರತೀಯ ಕ್ರಿಕೆಟಿಗರ ಪಟ್ಟಿ

ವಿರಾಟ್ ಕೊಹ್ಲಿ – 66 ಕೋಟಿ

ಎಂಎಸ್ ಧೋನಿ – 38 ಕೋಟಿ

ಸಚಿನ್ ತೆಂಡೂಲ್ಕರ್ – 28 ಕೋಟಿ

ಸೌರವ್ ಗಂಗೂಲಿ – 23 ಕೋಟಿ

ಹಾರ್ದಿಕ್ ಪಾಂಡ್ಯ – 12 ಕೋಟಿ

ರಿಷಬ್ ಪಂತ್ – 10 ಕೋಟಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular