ಸಚಿನ್ 49ನೇ ಶತಕದ ದಾಖಲೆ ಸರಿಗಟ್ಟಲು ಹೊರಟ ಕೊಹ್ಲಿ ಮತ್ತೊಂದು ದಾಖಲೆ

ಲಖನೌ: ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವಿಶ್ವಕಪ್ ಏಕದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು 100 ರನ್ ಗಳಿಂದ ಭಾರತ ಬಗ್ಗುಬಡಿದು ಸೆಮಿಫೈನಲ್ ಸ್ಥಾನ ಭದ್ರಪಡಿಸಿಕೊಂಡಿದೆ.

ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ ಸಚಿನ್ ತೆಂಡೂಲ್ಕರ್ ಅವರ 49ನೇ ಶತಕದ ದಾಖಲೆ ಸರಿಗಟ್ಟಲು ಹೊರಟ ಕೊಹ್ಲಿ ಸೊನ್ನೆಗೆ ನಿರ್ಗಮಿಸಿ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆ ಸರಿಗಟ್ಟಿದ್ದಾರೆ.

ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸೊನ್ನೆಗೆ ನಿರ್ಗಮಿಸಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಸಲ ಡಕೌಟ್ ಆದ ದಾಖಲೆ ಬರೆದರು. ಏಕದಿನ ಕ್ರಿಕೆಟ್ ನಲ್ಲಿ 16 ಬಾರಿ ಅವರು ಶೂನ್ಯ ಸಂಪಾದನೆ ಮಾಡಿದ್ದಾರೆ. ಇಂಗ್ಲೆಂಡ್ ತಂಡದ ವಿರುದ್ಧ ಮೂರು ಬಾರಿ ಯಾವುದೇ ರನ್ ಗಳಿಸಿಲ್ಲ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಒಟ್ಟಾರೆ 34ನೇ ಬಾರಿಗೆ ಶೂನ್ಯಕ್ಕೆ ಔಟಾದ ಕೊಹ್ಲಿ 34 ಸಲ ಡಕೌಟ್ ಆಗಿದ್ದ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ್ದಾರೆ.

ಭಾನುವಾರ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ 9 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ ಯಾವುದೇ ರನ್ ಗಳಿಸದೇ ಔಟಾದರು. ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಲ್ಲಿ ಡಕೌಟ್ ಆದ ದಾಖಲೆ ಬರೆದರು. ಪ್ರಸಕ್ತ ಟೂರ್ನಿಯ ಮೊದಲ 5 ಪಂದ್ಯಗಳಲ್ಲಿ ಒಂದು ಶತಕ, 3 ಅರ್ಥ ಶತಕ ಸಹಿತ 354 ರನ್ ಗಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read