BIG NEWS: ಅದಾನಿ ಪರ ಬ್ಯಾಟಿಂಗ್ ಮಾಡಿದ ವೀರೇಂದ್ರ ಸೆಹ್ವಾಗ್; ವ್ಯವಸ್ಥಿತ ಪಿತೂರಿ ಎಂದು ಟ್ವೀಟ್

ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ಅದಾನಿ ಸಮೂಹದ ಕುರಿತ ವರದಿ ಬಿಡುಗಡೆ ಮಾಡಿದ ಬಳಿಕ ಆ ಕಂಪನಿಯ ಷೇರುಗಳು ಪಾತಾಳಕ್ಕೆ ಕುಸಿದಿವೆ. ಅಲ್ಲದೆ ಈ ಎಲ್ಲ ಬೆಳವಣಿಗೆ ಕಾರಣಕ್ಕೆ ಗೌತಮ್ ಅದಾನಿ ಸಂಪತ್ತಿನಲ್ಲಿ ತೀವ್ರ ಇಳಿಕೆ ಕಂಡುಬಂದಿದೆ.

ಹೀಗಾಗಿ ಭಾರತೀಯ ಶ್ರೀಮಂತರ ಪಟ್ಟಿಯಲ್ಲಿ ಮೊದಲನೇ ಹಾಗೂ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ, ಈಗ ವಿಶ್ವದ ಟಾಪ್ 20 ಶ್ರೀಮಂತರ ಪಟ್ಟಿಯಿಂದಲೂ ಹೊರ ಬಿದ್ದಿದ್ದಾರೆ. ಇದರ ಮಧ್ಯೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್, ಅದಾನಿ ಸಮೂಹದ ಪರ ಬ್ಯಾಟಿಂಗ್ ಮಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ವೀರೇಂದ್ರ ಸೆಹ್ವಾಗ್, ವಿದೇಶಿಗರು ಭಾರತದ ಬೆಳವಣಿಗೆಯನ್ನು ಸಹಿಸಿಕೊಳ್ಳುವುದಿಲ್ಲ. ಹೀಗಾಗಿಯೇ ಇಂತಹ ಪಿತೂರಿಗಳನ್ನು ನಡೆಸುತ್ತಾರೆ. ಆದರೆ ಭಾರತ ಇದೆಲ್ಲದರಿಂದ ಹೊರಬಂದು ಮತ್ತಷ್ಟು ಸಶಕ್ತವಾಗಿ ಹೊರ ಹೊಮ್ಮಲಿದೆ ಎಂದು ತಿಳಿಸಿದ್ದಾರೆ.

https://twitter.com/virendersehwag/status/1622460678224379904?ref_src=twsrc%5Etfw%7Ctwcamp%5Etweetembed%7Ct

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read