ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಗೆ ವೀರೇಂದ್ರ ಹೆಗ್ಗಡೆ ಮೆಚ್ಚುಗೆ, ಧರ್ಮಸ್ಥಳಕ್ಕೆ ಬಂದು ಹೋಗಿ ಎಂದು ಸಿಎಂಗೆ ಕೋರಿಕೆ

ಬೆಂಗಳೂರು : ಉಚಿತ ಬಸ್ ಪ್ರಯಾಣದ ಸೇವೆ ನೀಡುವ ರಾಜ್ಯ ಸರ್ಕಾರ ಮಹತ್ವದ ಶಕ್ತಿ ಯೋಜನೆ’ಗೆ ರಾಜ್ಯದೆಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇದೀಗ ಶಕ್ತಿ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿ ಸಿಎಂ ಗೆ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಪತ್ರ ಬರೆದ ಡಾ.ವೀರೇಂದ್ರ ಹೆಗ್ಗಡೆ ‘ಅನೇಕ ಯೋಜನೆಗಳ ಮೂಲಕ ಜಡಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ, ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ,ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು,ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಅಪೇಕ್ಷೆಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಪತ್ರ ಬರೆದಿದ್ದಾರೆ.

ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರು ನಾನು ಮಂಡಿಸಿದ 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಬರೆದಿರುವ ಪತ್ರಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read