HomeLatest NewsBREAKING: ಇಡಿಯಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್: 1 ಕೋಟಿ ವಿದೇಶಿ ಕರೆನ್ಸಿ ಸೇರಿ...

BREAKING: ಇಡಿಯಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್: 1 ಕೋಟಿ ವಿದೇಶಿ ಕರೆನ್ಸಿ ಸೇರಿ 12 ಕೋಟಿ ಹಣ ಜಪ್ತಿ!

ಚಿತ್ರದುರ್ಗ: ಅಕ್ರಮ ಆನ್ ಲೈನ್ ಹಾಗೂ ಆಫ್ ಲೈನ್ ಬೆಟ್ಟಿಂಗ್ ಹಗರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ ಬಂಧಿಸಿದ್ದಾರೆ. ವಿರೇಂದ್ರ ಪಪ್ಪಿ ಹಾಗೂ ಸಹೋದರರ ಮನೆ ಮೇಲೆ ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ, ಹಣ, ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇಡಿ ದಾಳಿ ವೇಳೆ ವೀರೇಂದ್ರ ಪಪ್ಪಿಗೆ ಸೇರಿದ 1 ಕೋಟಿ ವಿದೇಶಿ ಕರೆನ್ಸಿ ಸೇರಿದಂತೆ 12 ಕೋಟಿ ಹಣ ಜಪ್ತಿ ಮಾಡಲಾಗಿದೆ. 6 ಕೋಟಿ ರೂ ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ, 4 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ನಿನ್ನೆ ವೀರೇಂದ್ರ ಪಪ್ಪಿ ಹಾಗೂ ಸಹೋದರರಿಗೆ ಸೇರಿದ ಚಳ್ಳಕೆರೆ ನಿವಾಸ, ಕಚೇರಿ, ಬೆಂಗಳೂರಿನ ನಿವಾಸ ಸೇರಿದಂತೆ ಒಟ್ಟು 30 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸೊ ಪರಿಶೀಲನೆ ನಡೆಸಿದ್ದಾರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular