ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರಾಗಿದೆ. ಹೊಸ ವರ್ಷದ ಸಂದರ್ಭದಲ್ಲಿಯೇ ವೀರೇಂದ್ರ ಪಪ್ಪಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ-ಇಡಿ ಯಿಂದ ಬಂಧಿಸಲ್ಪಟ್ಟು, ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ, ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

