ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಈಗಾಗಲೇ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿರುವ ಇಡಿ ಅಧಿಕಾರಿಗಳು ಚಿತ್ರದುರ್ಗದಲ್ಲಿ ಮತ್ತೆ ದಾಳಿ ನಡೆಸಿದ್ದಾರೆ.
ಆನ್ ಲೈನ್ ಬೆಟ್ಟಿಂಗ್ ಆಪ್, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ವೀರೇಂದ್ರ ಪಪ್ಪಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ. ಈ ನಡುವೆ ಇಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಡಲ್ಲಿ ಮತ್ತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಳ್ಳಕೆರೆಯ ವೀರಶೈವ ಸಹಕಾರಿ ಬ್ಯಾಂಕ್, ಕೋಟೆಕ್ ಮಹೀಂದ್ರಾ ಬ್ಯಾಂಕ್ ನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ವೇಳೆ ಸಿಕ್ಕ ಮಾಹಿತಿ ಆಧರಿಸಿ ಇಡಿ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.