HomeLatest NewsBREAKING: ಶಾಸಕ ವೀರೇಂದ್ರ ಪಪ್ಪಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ

BREAKING: ಶಾಸಕ ವೀರೇಂದ್ರ ಪಪ್ಪಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಆನ್ ಲೈನ್ ಬೆಟ್ಟಿಂಗ್, ಆಫ್ ಲೈನ್ ಬೆಟ್ಟಿಂಗ್, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿಸಲ್ಪಟ್ಟಿದ್ದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಇಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ವಿರೇಂದ್ರ ಪಪ್ಪಿ ಅವರನ್ನು ಸೆಪ್ಟೆಂಬರ್ 22ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular