HomeLatest NewsBREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಜೈಲುವಾಸವೇ ಗತಿ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

BREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಜೈಲುವಾಸವೇ ಗತಿ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ-ಇಡಿಯಿಂದ ಬಂಧಿಸಿಲ್ಪಟ್ಟು ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ, ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಡಿಸೆಂಬರ್ 29ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ವೀರೇಂದ್ರ ಪಪ್ಪಿಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಲ ತಿಂಗಳ ಹಿಂದೆ ವಿರೇಂದ್ರ ಪಪ್ಪಿಯನ್ನು ಸಿಕ್ಕಿಂನಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular