ಛತ್ತೀಸ್ ಗಢದ : ಪ್ರಧಾನಿ ಮೋದಿ ಸಮ್ಮುಖದಲ್ಲಿ ಛತ್ತೀಸ್ ಗಢದ ನೂತನ ಸಿಎಂ ಆಗಿ ವಿಷ್ಣುದೇವ್ ಸಾಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಛತ್ತೀಸ್ ಗಢದ ರಾಜ್ಯಪಾಲರು, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಉನ್ನತ ಬಿಜೆಪಿ ನಾಯಕರ ಸಮ್ಮುಖದಲ್ಲಿ ವಿಷ್ಣು ದೇವ್ ಸಾಯಿ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ್ದ ಬಿಜೆಪಿ ಛತ್ತೀಸ್ಗಢದ ಮುಖ್ಯಮಂತ್ರಿಯಾಗಿ ರಾಜ್ಯದ ಆದಿವಾಸಿ ನಾಯಕ ವಿಷ್ಣುದೇವ್ ಸಾಯಿ ಅವರನ್ನು ನೇಮಕ ಮಾಡಲಾಗಿತ್ತು. ಸಾಯ್ ಅವರು 1989ರಲ್ಲಿ ತಮ್ಮ ಗ್ರಾಮ ಬಗಿಯಾದಿಂದ ಗ್ರಾಮ ಪಂಚಾಯಿತಿ ಸದಸ್ಯರಾಗುವ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು.
https://twitter.com/ANI/status/1734883317621854477?ref_src=twsrc%5Etfw%7Ctwcamp%5Etweetembed%7Ctwterm%5E1734883317621854477%7Ctwgr%5E9962633f62e274d12880cdc8ea6777cdcfa247b5%7Ctwcon%5Es1_&ref_url=https%3A%2F%2Feconomictimes.indiatimes.com%2Fnews%2Fnewsblogs%2Fmp-chhattisgarh-cm-oath-ceremony-live-news-updates-chief-minister-bjp-mohan-yadav-vishnu-deo-sai-modi-shah%2Fliveblog%2F105950080.cms