HomeLatest NewsGOOD NEWS : 'ವಿಶ್ವಕರ್ಮ' ಸಮುದಾಯಗಳ ಅಭಿವೃದ್ದಿ ನಿಗಮದಿಂದ ಸಾಲ ಸೌಲಭ್ಯ- ಸಹಾಯಧನಕ್ಕೆ ಅರ್ಜಿ ಆಹ್ವಾನ

GOOD NEWS : ‘ವಿಶ್ವಕರ್ಮ’ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಸಾಲ ಸೌಲಭ್ಯ- ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತದ ವಿವಿಧ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ವನ್ನು ನೀಡಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ( ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ( ವಾರ್ಷಿಕ ವರಮಾನ ರೂ.15 ಲಕ್ಷ ಮಿತಿಯಲ್ಲಿರಬೇಕು) ಹಾಗೂ ಸ್ವತಂತ್ರ ಅಮೃತ ಮುನ್ನಡೆ ಯೋಜನೆಗೆ www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದನ್ವಯ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು, ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು, ನಿಗಮದ/ಸರ್ಕಾರದ ಯಾವುದಾರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು, ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ ಒಳಗೊಂಡಿರಬೇಕು, ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು, ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು, ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರವೇಶದವರಿಗೆ ರೂ.1.20 ಲಕ್ಷ ಮಿತಿಯೊಳಗಿರಬೇಕು ಹಾಗೂ ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇರಿಸಲಾಗಿದೆ.

ಜು.2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಿರಬೇಕು, ಬೆಂಗಳೂರು-ಒನ್/ ಕರ್ನಾಟಕ ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‌ಸೈಟ್ https://kvcdcl.karnataka.gov.in ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಗಾಂಧಿನಗರ, ದೂ.ಸಂ: 08182229634 ಇಲ್ಲಿ ಪಡೆಯಬಹುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular