ಪ್ರತಿ ಮನೆಗೆ ಭೇಟಿ ನೀಡಿ ನಿಗದಿತ ವೇಳೆಯೊಳಗೆ ಒಳಮೀಸಲಾತಿ ಸಮೀಕ್ಷೆ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ : ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತಾದ ಸಮೀಕ್ಷೆಯು ಸರ್ಕಾರದ ಆದ್ಯತೆಯ ಸಮೀಕ್ಷೆಯಾಗಿದ್ದು ಸಮೀಕ್ಷೆದಾರರು ಇದನ್ನು ಗಂಭೀರವಾಗಿ ಪರಿಗಣಿಸಿ, ಪ್ರತಿ ಮನೆ ಮನೆಗೆ ತೆರಳಿ ಕೈಗೊಂಡು ನಿಗದಿತ ವೇಳೆಯೊಳಗೆ ಈ ಸಮೀಕ್ಷೆಯನ್ನು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿ.ಪಂ ಸಭಾಂಗಣದಲ್ಲಿ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ದಾಸ್ ರವರ ಏಕಸದಸ್ಯ ವಿಚಾರಣಾ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ಸಮೀಕ್ಷೆ ನಡೆಸುವ ಕಾರ್ಯಕ್ಕೆ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೆöÊನರ್ಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ವಿಶ್ಲೇಷಣೆ ಮಾಡಿ ಒಳ ಮೀಸಲಾತಿ ವರ್ಗೀಕರಣ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡುವ ಜವಾಬ್ದಾರಿಯನ್ನು ಆಯೋಗವು ಹೊಂದಿದ್ದು, ಈ ಉದ್ದೇಶಕ್ಕಾಗಿ ಸರ್ಕಾರ ಪರಿಶಿಷ್ಟ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಕೈಗೊಳ್ಳುತ್ತಿದೆ.

ಈ ಸಮೀಕ್ಷೆಯು ಸೂಕ್ಷö್ಮತೆಯಿಂದ ಕೂಡಿದ್ದು ಒಂದೊAದು ತಾಲ್ಲೂಕಿನಲ್ಲಿಯೂ ಸಮೀಕ್ಷೆ ಅನುಭವ ಭಿನ್ನವಾಗಿರಬಹುದು. ಯಾವುದೇ ಸಮಸ್ಯೆಗಳಿಗೆ ಎಡೆ ಮಾಡದಂತೆ ಸಮೀಕ್ಷೆ ನಡೆಸಬೇಕು. ತೀರ್ಥಹಳ್ಳಿ, ಹೊಸನಗರ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕುಗಳಲ್ಲಿ ಪರಿಶಿಷ್ಟ ಜಾತಿ ಜನಸಂಖ್ಯೆ ಸಾಕಷ್ಟು ಇದ್ದು ಎಲ್ಲ ಮನೆ ಮನೆಗಳಿಗೆ ಭೇಟಿ ನೀಡಿ, ನಿಗದಿತ ನಮೂನೆಯಲ್ಲಿ ಕೇಳಲಾದ ಮಾಹಿತಿಯನ್ನು ಸಂಗ್ರಹಿಸಬೇಕು. ಗಂಭೀರವಾಗಿ ಈ ಕಾರ್ಯ ಕೈಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಇನ್ನೊಂದು ಹಂತದ ತರಬೇತಿ ಹಾಗೂ ಮಾಕ್ ಟ್ರಯಲ್ ಇದ್ದು ಅಲ್ಲಿ ಸಮೀಕ್ಷೆದಾರರು ಯಾವುದೇ ರೀತಿಯ ಸಂದೇಹಗಳಿದ್ದರೆ ಬಗೆಹರಿಸಿಕೊಳ್ಳಬಹುದು ಎಂದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಅಶೋಕ್ ಪಾಟೀಲ್ ಎಂ ಇವರು, ಪಿಪಿಟಿ ಪ್ರದರ್ಶನದ ಮೂಲಕ ಸಮೀಕ್ಷೆ ನಡೆಸುವ ಬಗೆಯನ್ನು ವಿವರಿಸಿದರು. ಸಮೀಕ್ಷೆದಾರರು ಯಾವುದೇ ಮನೆಯನ್ನು ಬಿಡದಂತೆ ಸಮೀಕ್ಷೆ ನಡೆಸಬೇಕು. ಮೂರು ಹಂತದ ಸಮೀಕ್ಷೆ ಇದಾಗಿದ್ದು ಮೇ 5 ರಿಂದ 17 ರವರೆಗೆ ಮನೆ ಮನೆ ಭೇಟಿ ಮಾಡಿ ಪ್ರಶ್ನಾವಳಿಯನ್ನು ತುಂಬುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್, ಎಸಿ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲೇಶಪ್ಪ, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read