HomeKarnatakaಕೋಮುದಳ್ಳುರಿಗೆ ನಲುಗಿದ ನಾಗಮಂಗಲಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ಕೋಮುದಳ್ಳುರಿಗೆ ನಲುಗಿದ ನಾಗಮಂಗಲಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ಮಂಡ್ಯ: ಗಣಪತಿ ವಿಸರ್ಜನೆ ವೇಳೆ ಕೋಮುದಳ್ಳುರಿ, ವ್ಯಾಪಕ ಹಿಂಸಾಚಾರಕ್ಕೆ ನಲುಗಿದ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಪಟ್ಟಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇಂದು ಮಂಡ್ಯ ಕ್ಷೇತ್ರದ ಜೆಡಿಎಸ್ ಸಂಸದರಾಗಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 8 ಗಂಟೆಗೆ ನಾಗಮಂಗಲಕ್ಕೆ ಆಗಮಿಸಲಿರುವ ಕುಮಾರಸ್ವಾಮಿ ಗಲಭೆಯಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟುಗಳ ಪರಿಶೀಲನೆ ನಡೆಸಿ ಸಂತ್ರಸ್ತರ ಭೇಟಿ ಮಾಡಲಿದ್ದಾರೆ.

ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಲಿದ್ದಾರೆ, ಕುಮಾರಸ್ವಾಮಿಯವರಿಗೆ ಸುರೇಶ್ ಗೌಡ ಸೇರಿದಂತೆ ಜೆಡಿಎಸ್ ಮುಖಂಡರು ಸಾಥ್ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular