VISL ಮುಚ್ಚಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ‘ಬಾಯ್ ಬಡ್ಕೋ’ ಚಳವಳಿ

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿರುವ ಪ್ರತಿಷ್ಠಿತ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಉಳಿಸಿಕೊಳ್ಳಲು ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ.

ಮಂಗಳವಾರದಂದು ಕಾರ್ಮಿಕರು ಐದು ನಿಮಿಷಗಳ ಕಾಲ ವಿನೂತನ ರೀತಿಯಲ್ಲಿ ‘ಬಾಯ್ ಬಡ್ಕೊ’ ಚಳವಳಿ ನಡೆಸಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಮ್ಮನ್ನು ಬೀದಿಗೆ ತಳ್ಳಿತಲ್ಲಪ್ಪೋ ಅಯ್ಯಯ್ಯೋ……. ಎಂದು ಲಬಲಬನೆ ಬಾಯಿ ಬಡಿದುಕೊಂಡಿದ್ದಾರೆ.

ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಸಹ ಬೆಂಬಲ ಸೂಚಿಸುತ್ತಿದ್ದು, ಕಾರ್ಖಾನೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಭಯ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read