ಯಾವುದೇ ಕಾರಣಕ್ಕೂ ವಿಐಎಸ್ಎಲ್ ಮುಚ್ಚಲು ಬಿಡಲ್ಲ: ಸಿಎಂ ಭರವಸೆ

ಶಿವಮೊಗ್ಗ: ಭದ್ರಾವತಿ ಪ್ರತಿಷ್ಠಿತ ವಿಐಎಸ್ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸಿದ್ದ ಸಂದರ್ಭದಲ್ಲಿ ಗುತ್ತಿಗೆ ಕಾರ್ಮಿಕರ ನಿಯೋಗದಿಂದ ಮನವಿ ಸ್ವೀಕರಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ವಿಐಎಸ್ಎಲ್ ಕಾರ್ಖಾನೆ ಮುಚ್ಚಲು ಮುಂದಾಗಿದ್ದು, ಈಗಾಗಲೇ ಹಲವು ಇಲಾಖೆಗಳ ಉತ್ಪಾದನೆ ನಿಲ್ಲಿಸಿದ ಆಡಳಿತ ವರ್ಗದಿಂದ ವಸ್ತುಗಳನ್ನು ಬೇರೆಡೆ ಸಾಗಿಸಲು ಹುನ್ನಾರ ನಡೆಸಲಾಗುತ್ತಿದೆ. ಈ ಪ್ರತಿಷ್ಠಿತ ಉದ್ದಿಮೆಯನ್ನು ಉಳಿಸಬೇಕೆಂದು ಗುತ್ತಿಗೆ ಕಾರ್ಮಿಕರು ಸಿಎಂಗೆ ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಐಎಸ್ಎಲ್ ಕಾರ್ಖಾನೆ ಮುಚ್ಚದಂತೆ ಕೇಂದ್ರ ಸಚಿವರಾದ ಅಮಿತ್ ಶಾ, ಜ್ಯೋತಿರಾಧಿತ್ಯ ಸಿಂಧಿಯಾ ಅವರೊಂದಿಗೆ ಚರ್ಚೆ ನಡೆಸಿದ್ದು, ಯಾವುದೇ ಕಾರಣಕ್ಕೂ ಕಾರ್ಖಾನೆ ಮುಚ್ಚುವುದಿಲ್ಲವೆಂದು ಭರವಸೆ ನೀಡಿದ್ದಾರೆ. ಕಾರ್ಮಿಕರು ಆತಂಕ ಪಡಬೇಕಿಲ್ಲ. ವಿಐಎಸ್ಎಲ್ ಕಾರ್ಖಾನೆ ಮುಚ್ಚಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read