HomeIndiaBIG NEWS: ದೃಷ್ಟಿ ದೋಷವುಳ್ಳವರಿಗೆ ಉದ್ಯೋಗಾವಕಾಶ ನಿರಾಕರಿಸುವಂತಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

BIG NEWS: ದೃಷ್ಟಿ ದೋಷವುಳ್ಳವರಿಗೆ ಉದ್ಯೋಗಾವಕಾಶ ನಿರಾಕರಿಸುವಂತಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ದೃಷ್ಟಿ ದೋಷವುಳ್ಳವರಿಗೆ ನ್ಯಾಯಾಂಗ ಸೇವೆಗಳಲ್ಲಿ ಉದ್ಯೋಗಾವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಕೆಲವು ರಾಜ್ಯಗಳಲ್ಲಿ ನ್ಯಾಯಾಂಗ ಸೇವೆಗಳಲ್ಲಿ ಅಂಧ ಅಭ್ಯರ್ಥಿಗಳಿಗೆ ಕೋಟಾ ನೀಡದಿರುವ ಕುರಿತಾಗಿ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಪ್ರಕರಣ ಸೇರಿದಂತೆ ಆರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಆರ್. ಮಹದೇವನ್ ಅವರಿದ್ದ ನ್ಯಾಯ ಪೀಠ ಕಳೆದ ವರ್ಷ ಡಿಸೆಂಬರ್ 3ರಂದು ತೀರ್ಪನ್ನು ಕಾಯ್ತಿರಿಸಿತ್ತು.

ಅಂಗವಿಕಲತೆ ಕಾರಣಕ್ಕೆ ನ್ಯಾಯಾಂಗ ಸೇವೆಯ ನೇಮಕಾತಿಗಳಲ್ಲಿ ಯಾವುದೇ ತಾರತಮ್ಯ ಮಾಡಬಾರದು. ಯಾವುದೇ ವ್ಯಕ್ತಿಯನ್ನು ಅಂಗವೈಕಲ್ಯದ ಕಾರಣದಿಂದ ದೂರ ಇಡುವಂತಿಲ್ಲ. ಅಂಗವಿಕಲತೆಯುಳ್ಳವರನ್ನು ಒಳಗೊಂಡ ನೀತಿ ಚೌಕಟ್ಟು ರೂಪಿಸಲು ರಾಜ್ಯವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೋಮವಾರ ತೀರ್ಪು ಪ್ರಕಟಿಸಿದ ನ್ಯಾಯಪೀಠ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular