HomeLatest NewsBIG NEWS: ವಿಟ್ಲದಲ್ಲಿ ಸ್ಫೋಟ ಪ್ರಕರಣ: ಸಿಡಿಮದ್ದು ತಯಾರಿಕಾ ಘಟಕದ ವ್ಯಕ್ತಿ ಅರೆಸ್ಟ್

BIG NEWS: ವಿಟ್ಲದಲ್ಲಿ ಸ್ಫೋಟ ಪ್ರಕರಣ: ಸಿಡಿಮದ್ದು ತಯಾರಿಕಾ ಘಟಕದ ವ್ಯಕ್ತಿ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿಯಲ್ಲಿ ಶುಕ್ರವಾರ ಸಂಜೆ ನಡೆದಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಮದ್ದು ತಯಾರಿಕಾ ಘಟಕದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಫೋಟದ ಬಗ್ಗೆ ಸ್ಥಳೀಯ ಪಿಡಿಒ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂಬಳಬೆಟ್ಟು ನೂಜಿ ಎಂಬಲ್ಲಿ ಸಿಡಿಮದ್ದು ಸ್ಫೋಟಗೊಂಡಿರುವ ಬಗ್ಗೆ ಮಾಹಿತಿ ಹಿನ್ನೆಲೆ ಪಿಡಿಒ ಮತ್ತು ಕಂದಾಯ ನಿರೀಕ್ಷಕರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಸರ್ಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಆರೋಪಿ ಅಬ್ದುಲ್ ಗಫೂರ್ ಎಂಬಾತ ಅಕ್ರಮವಾಗಿ ಶೆಡ್ ನಿರ್ಮಿಸಿ, ಯಾವುದೇ ಪರವಾನಗಿ ಪಡೆಯದೇ ಸಿಡಿಮದ್ದುಗಳನ್ನು ತಯಾರಿಸಿ, ಅಕ್ರಮವಾಗಿ ಸಂಗ್ರಹಿಸಿದ್ದ. ಈ ಸಿಡಿಮದ್ದುಗಳು ಸ್ಪೋಟಗೊಂಡಿವೆ.

ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಮರಗಳು ಸುಟ್ಟು ಹೋಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತ ಅಬ್ದುಲ್ ಗಫೂರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟಕದಲ್ಲಿ ಸಿಡಿಮದ್ದಿಗೆ ಬೇಕಾದ ರಾಸಾಯನಿಕವನ್ನು ಮಿಶ್ರಣ ಮಾಡಿ ಕಾರ್ಮಿಕರು ಸಂಜೆಯ ಚಹಾ ಸೇವಿಸಲು ಹೋಗುತ್ತಿದ್ದ ವೇಳೆ ಒಮ್ಮೆಲೆ ಘಟಕದಲ್ಲಿ ಸ್ಫೋಟ ಉಂಟಾಗಿದೆ. ಸ್ಫೋಟಕ್ಕೆ ಐದು ಸೆಂಟ್ಸ್​ನಷ್ಟು ಸ್ಥಳ ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದೆ.

2017ರಲ್ಲಿ ಇಲ್ಲಿನ ಸಿಡಿಮದ್ದು ಘಟಕದಲ್ಲಿ ಇದೇ ರೀತಿ ಸ್ಪೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರು. ಶುಕ್ರವಾರ ಮತ್ತೆ ಇಲ್ಲಿ ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಸ್ಥಳದಲ್ಲಿ ಅಮೋನಿಯಂ ನೈಟ್ರೇಟ್ ಸೇರಿದಂತೆ ಹಲವು ವಸ್ತುಗಳು ಕಂಡು ಬಂದಿವೆ.ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಸ್ಪೋಟವಾಗದೇ ಉಳಿದ ವಸ್ತುಗಳನ್ನು ನದಿ ನೀರಿನಲ್ಲಿ ಎಸೆಯಲಾಗಿದೆ ಎಂದು ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular