ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 4ಕ್ಕೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. 23ನೇ ಭಾರತ-ರಷ್ಯಾ ಶೃಂಗಸಭೆಗಾಗಿ ಪುಟಿನ್ ಭಾರತಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.
ಡಿಸೆಂಬರ್ 4ರಂದು ಭಾರತಕ್ಕೆ ಆಗಮಿಸಲಿರುವ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 5ರವರೆಗೆ ಎರಡು ದಿನಗಳ ಕಾಲ ಭಾರತದಲ್ಲಿರಲಿದ್ದಾರೆ. ಭಾರತ ಭೇಟಿ ವೇಳೆ ಪುಟಿನ್ ಹಾಗೂ ಪ್ರಧಾನಿ ಮೋದಿ ರಾಷ್ಟ್ರಪದಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಹಾಗೂ ರಷ್ಯಾ ಮೇಲೆ ಭಾರಿ ಸುಂಕ ವಿಧಿಸಿರುವುದರಿಂದ ಪುಟಿನ್ ಭಾರತ ಭೇಟಿ ಮಹತ್ವ ಪಡೆದುಕೊಂಡಿದೆ.
