HomeKarnatakaಕಾಂಗ್ರೆಸ್ ಗೆ ಬೆಂಬಲ ಎಂಬ ಅಧ್ಯಕ್ಷರ ಹೇಳಿಕೆಗೆ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರೋಧ: ಹೇಳಿಕೆ ವಾಪಸ್...

ಕಾಂಗ್ರೆಸ್ ಗೆ ಬೆಂಬಲ ಎಂಬ ಅಧ್ಯಕ್ಷರ ಹೇಳಿಕೆಗೆ ಒಕ್ಕಲಿಗರ ಸಂಘದ ಪದಾಧಿಕಾರಿಗಳ ವಿರೋಧ: ಹೇಳಿಕೆ ವಾಪಸ್ ಪಡೆಯಲು ಆಗ್ರಹ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ಡಿ. ಹನುಮಂತಯ್ಯ ನೀಡಿರುವ ಹೇಳಿಕೆಗೆ ಸಂಘದ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿದೆ. ಅಧ್ಯಕ್ಷರು ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕೆಂದು ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಸಿ. ಜಯಮುತ್ತು ಪ್ರಕಟಣೆ ನೀಡಿ, ಒಕ್ಕಲಿಗರ ಸಂಘದ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸೇರಿದಂತೆ ಸಮುದಾಯದ ಹಲವು ನಾಯಕರು, ಗಣ್ಯರು ಅಪಾರ ಕೊಡುಗೆ ನೀಡುತ್ತಾ ಬಂದಿದ್ದಾರೆ. ಹಿಂದಿನಿಂದಲೂ ಆದಿಚುಂಚನಗಿರಿ ಮಠದ ಸ್ವಾಮೀಜಿ ಮತ್ತು ಇತರೆ ಮಠಾಧೀಶರು ಸಂಘಕ್ಕೆ ಸೂಕ್ತ ಸಲಹೆ, ಸೂಚನೆ, ಮಾರ್ಗದರ್ಶನ ಮಾಡುತ್ತಿದ್ದಾರೆ. ಕಾಲ ಕಾಲಕ್ಕೆ ಅಧಿಕಾರಕ್ಕೆ ಬರುವ ಸರ್ಕಾರಗಳು ಪಕ್ಷಾತೀತವಾಗಿ ಸಹಾಯ ಮಾಡುತ್ತಿವೆ. ಹಾಗಾಗಿ ಸಂಘದ ಸರ್ವ ಸದಸ್ಯರು ತಮಗೆ ಇಷ್ಟ ಬಂದವರನ್ನು ಆಯ್ಕೆ ಮಾಡುವ ಅಧಿಕಾರ ಪ್ರಜಾಪ್ರಭುತ್ವದಲ್ಲಿ ಇದೆ ಎಂದು ತಿಳಿಸಿದ್ದಾರೆ.

ಆಡಳಿತ ಮಂಡಳಿಯ ನಿರ್ದೇಶಕರು ಕೂಡ ಆಯಾ ಜಿಲ್ಲೆಗಳಲ್ಲಿ ವಿವಿಧ ಪಕ್ಷಗಳಲ್ಲಿ ಸ್ಥಳೀಯವಾಗಿ ಗುರುತಿಸಿಕೊಂಡು ಜನ ಸೇವೆ ಮಾಡುತ್ತಿದ್ದಾರೆ. ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆಯಾದ ನಂತರ ಪಕ್ಷಾತೀತವಾಗಿ ಸಂಘದ ಒಳಿತಿಗೆ ಶ್ರಮಿಸುತ್ತಿದ್ದಾರೆ. ರಾಜ್ಯ ಒಕ್ಕಲಿಗರ ಸಂಘವು ನಿರ್ದಿಷ್ಟವಾಗಿ ಯಾವುದೇ ವ್ಯಕ್ತಿ ಅಥವಾ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಘವು ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದೆ ಎಂಬುದು ಡಿ. ಹನುಮಂತಯ್ಯ ಅವರ ವೈಯಕ್ತಿಕ ಹೇಳಿಕೆಯಾಗಿದೆ. ಅಧ್ಯಕ್ಷರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular