HomeLatest NewsBREAKING: ಮತಗಳ್ಳತನ ಪ್ರಕರಣ: ಬಿಜೆಪಿ, ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

BREAKING: ಮತಗಳ್ಳತನ ಪ್ರಕರಣ: ಬಿಜೆಪಿ, ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ನವದೆಹಲಿ: ಮತಗಳ್ಳತನದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಪ್ರಾರಂಭಿಸಿದ್ದು, ಬಿಜೆಪಿ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ವೋಟ್ ಚೋರಿ ವಿರುದ್ಧ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸಚಿವರು, ಶಾಸಕರು, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಹಲವು ರಾಜ್ಯಗಳ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.

ಬಿಜೆಪಿ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ನಡೆಸುತ್ತಿರುವ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular