ಕಲಬುರಗಿ: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖಾ ತಂಡ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಹಾಗೂ ಅವರ ಪುತ್ರ ಹರ್ಷಾನಂದ ಗುತ್ತೇದಾರ್ ಸೇರಿದಂತೆ ಏಳು ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಈ ವಿಚಾರವಗಿ ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಷಾನಂದ ಗುತ್ತೇದಾರ್, ಮತಗಳ್ಳತನ ಪ್ರಕರಣದಲ್ಲಿ ನಮ್ಮ ಪಾತ್ರವಿಲ್ಲ. ಆದರೆ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಅಧಿಕಾರ ದುರುಪಯೋಗಪಡಿಸಿಕೊಂಡು ನಮ್ಮ ಹೆಸರನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸುವಂತೆ ಮಾಡಿಸಿದೆ. ಇದು ಕಾಂಗ್ರೆಸ್ ಕುತಂತ್ರ ಎಂದು ಕಿಡಿಕಾರಿದ್ದಾರೆ.
ಚಾರ್ಜ್ ಶೀಟ್ ನಲ್ಲಿ ಏನೆಲ್ಲಾ ಅಂಶಗಳಿವೆ ಎಂಬ ಬಗ್ಗೆ ನಮಗಿನ್ನೂ ಗೊತ್ತಿಲ್ಲ. ಸೋಮವಾರ ನೋಟಿಸ್ ನೀಡಿ ನಮ್ಮ ಹೇಳಿಕೆಗಳನ್ನು ಪಡೆದಿದ್ದರು. ಪ್ರಕರಣದಲ್ಲಿ ನಮ್ಮ ಪಾತ್ರವಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸುತ್ತಿದ್ದೇನೆ ಎಂದರು.
ಕಾಂಗ್ರೆಸ್ ಅಧಿಕಾರಿಗಳನ್ನು ಬಳಸಿಕೊಂಡು ನನ್ನ ಹಾಗೂ ತಂದೆಯ ಹೆಸರನ್ನು ಚಾರ್ಜ್ ಶೀಟ್ ನಲ್ಲಿ ಸೇರಿಸಿದೆ ಎಂದು ಆರೋಪಿಸಿದ್ದಾರೆ.
