HomeKarnatakaಗಮನಿಸಿ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಂದೇ ಕೊನೆ ದಿನ

ಗಮನಿಸಿ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಂದೇ ಕೊನೆ ದಿನ

ಬೆಂಗಳೂರು: ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಲೋಕಸಭೆ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮಾರ್ಚ್ 25 ಕೊನೆಯ ದಿನವಾಗಿದೆ.

ಸೋಮವಾರ ಹೊಸದಾಗಿ ಮತದಾರರ ನೋಂದಣಿಗೆ ಅಥವಾ ಮತದಾರರ ಚೀಟಿಯಲ್ಲಿ ಪರಿಷ್ಕರಣೆಗೆ ಗಡುವು ಮುಕ್ತಾಯವಾಗುತ್ತದೆ.

ಮೇ 7ರಂದು ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ ಸೇರಿದಂತೆ 14 ಕ್ಷೇತ್ರಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅಥವಾ ತಿದ್ದುಪಡಿಗೆ ಏಪ್ರಿಲ್ 9ರವರೆಗೂ ಅವಕಾಶವಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗಿದ್ದರೆ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೂ ಆಯೋಗ ಸೂಚಿಸಿದ ದಾಖಲೆಗಳಲ್ಲಿ ಒಂದನ್ನು ತೋರಿಸಿ ಮತದಾನ ಮಾಡಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular